ಹಂಪಿ: ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ

Upayuktha
1 minute read
0


ಹೊಸಪೇಟೆ:
ವಿಶ್ವ ಪ್ರಸಿದ್ಧ ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ತಲೆ ಎತ್ತಿರುವ ಕೆಲ ಅಕ್ರಮ ಕಟ್ಟಡಗಳನ್ನು ತೆರವು ಕಾರ್ಯಚರಣೆ ನಡೆಯಿತು. ಜಿಲ್ಲಾಡಳಿತ, ಹವಾಮಾನ ಹಾಗೂ ಸ್ಥಳೀಯ ಗ್ರಾ.ಪಂ. ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಶ್ರೀ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನ ಸಮೀಪದ ಜನತಾ ಪ್ಲಾಟ್ ನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಶೆಡ್‌ಗಳು, ಅಂಗಡಿಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ಕಟ್ಡಡಗಳ ತೆರವುಗೊಳಿಸುವ ಕಾರ್ಯ ನಡೆಸಿದರು. ಜನತಾ ಪ್ಲಾಟ್  ಪ್ರದೇಶದಲ್ಲಿ ಹೋಂ ಸ್ಟೇಗಳನ್ನು ಹೈಕೋರ್ಟ್ ಆದೇಶದ ಮೇರೆಗೆ ಈಗಾಗಲೇ ಕೆಲವು ಅಂಗಡಿಗಳನ್ನು ಮುಚ್ಚಿಸಲಾಗಿತ್ತು. 


ಆದರೆ, ಕೆಲವು ಕಡೆ ನಿಗದಿತ ಸ್ಥಳಕ್ಕಿಂತ ಹೆಚ್ಚುವರಿ ಸ್ಥಳವನ್ನು ಆಕ್ರಮಿಸಿಕೊಂಡು ಶೆಡ್, ಅಂಗಡಿ ನಿರ್ಮಿಸಿಕೊಂಡಿದ್ದು ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಜುಲೈ 11 ರಂದು ನಡೆದಿದ್ದ ಪ್ರಾಧಿಕಾರದ ಸಭೆಯಲ್ಲಿ ಇಂತಹ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು.


ಪ್ರಾಧಿಕಾರದ ನಿರ್ಧಾರದಂತೆ ಅಕ್ರಮ ಕಟ್ಟಡ ನಿರ್ಮಿಸಿಕೊಂಡವರಿಗೆ ಮೊದಲಾಗಿಯೇ ನೋಟಿಸ್ ನೀಡಬೇಕಿತ್ತು. ಆದರೆ, ನೋಟಿಸ್ ನೀಡಿದ್ದು ಅ.24ರಂದು. ರಾತ್ರಿ ಕಳೆದು ಬೆಳಗಾಗುವುದರೊಳಗೆ ಮನೆ ಮುಂದೆ ಜೆಸಿಬಿ ನಿಂತಿವೆ. ಏನಾಗುತ್ತಿದೆ ಎಂದು ನೋಡ ನೋಡುತ್ತಿದಂತೇ ಅತಿಕ್ರಮ ಕಟ್ಟಗಳನ್ನು ತಡರವುಗೊಳಿಸಲಾಯಿತು ಎಂದು ಸ್ಥಳೀಯರು ಅಳಲು ತೋಡಿಕೊಂಡರು. ಅತಿಕ್ರಮ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಮಾಡಲಾಗಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
To Top