ಆಯೋಜನೆ : ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್
ಬೆಂಗಳೂರು: ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.20ರಂದು ಸಂಜೆ 6.00ಗಂಟೆಗೆ ವಿಶ್ವ ಮಧ್ವಮತ ವೆಲ್‌ಫೇರ್ ಅಸೋಸಿಯೇಷನ್ ಆಯೋಜಿಸಿದೆ.
ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂರ‍್ಯ ಮಾಡುತ್ತಿರುವ ವಿಎಂಡ್ಬ್ಲ್ಯೂ ವತಿಯಿಂದ ಈ ಸಮಾರಂಭ ಏರ್ಪಡಿಸಿದ್ದು, ಅಂದು ಸಂಜೆ 3.00 ರಿಂದ 5.30 ರವರೆಗೆ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದಿಂದ ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ.
ಸಭಾ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಮುಳಬಾಗಿಲು ಶ್ರೀಪಾದರಾಜ ಮಠದ ಶ್ರೀ ಸುಜಯನಿಧಿ ತೀರ್ಥರು ವಹಿಸುವರು. ಬೆಂಗಳೂರು ದಕ್ಷಿಣ ಸಂಸದ ಎಲ್.ಎಸ್.ತೇಜಸ್ವಿ ಸೂರ್ಯ , ಬಸವನಗುಡಿ ಶಾಸಕ ಎಲ್.ಎ.ರವಿಸುಬ್ರಮಣ್ಯ, ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್ , ಗರುಡಾ ಫೌಂಡೇಷನ್ ಮುಖ್ಯಸ್ಥೆ ಮೇದಿನಿ ಉದಯ ಗರುಡಾಚಾರ್, ಎಕೆಬಿಎಂಎಸ್ ನಿಕಟಪೂರ್ವ ಉಪಾಧ್ಯಕ್ಷ ಆರ್.ಲಕ್ಷ್ಮೀಕಾಂತ್, ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದ ಅಧ್ಯಕ್ಷ ನಾಗೇಶ್, ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯಅತಿಥಿಗಳಾಗಿ ಭಾಗವಹಿಸುವರು.
ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಾದ ಅಂತಾರಾಷ್ಟ್ರೀಯ ಖ್ಯಾತಿಯ ಹರಿದಾಸ ಸಾಹಿತ್ಯ ವಿದ್ವಾಂಸ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ, ಟಿಟಿಡಿ ಆಡಳಿತ ಮಂಡಳಿಯ ನಿಕಟಪೂರ್ವ ಸದಸ್ಯ ಮತ್ತು ಎಸ್‌ವಿಬಿಸಿ ನಿರ್ದೇಶಕ ಡಾ.ಡಿ.ಪಿ. ಅನಂತ , ಸಮಾಜ ಸೇವಕ ವಿದ್ವಾನ್ ಪ್ರಸನ್ನ ಹೆಬ್ಬಣಿ, ವಿಜಯಮಾಲಾ ಟ್ರಸ್ಟ್ ಸಂಸ್ಥಾಪಕಿ ಹರಿಣೀ ಪಗಡಾಲ ರವರುಗಳಿಗೆ ಮತ್ತು ಚಾಮರಾಜಪೇಟೆ ‘ಶ್ರೀಮನ್ಮಾಧ್ವ ಸಂಘ’ಕ್ಕೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿಎಂಡಬ್ಲ್ಯೂಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ.ವೆಂಕೋಬ ರಾವ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ, ವಿವರಗಳಿಗೆ : 91138 53325
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ