ಬಳ್ಳಾರಿ: ಬಳ್ಳಾರಿಯ ವೀರಶೈವ ವಿದ್ಯಾವರ್ಧಕ ಸಂಘದಿಂದ ವೈದ್ಯಕೀಯ ಕಾಲೇಜ್ ಪ್ರಾರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಪ್ರಸ್ತಾಪಿಸಿದರು. ಅವರು ಬಳ್ಳಾರಿ ನಗರಕ್ಕೆ ರೈಲ್ವೆ ಕಾಮಗಾರಿಗಳ ವೀಕ್ಷಣೆಗೆ ಹಾಗೂ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಂದರ್ಭದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಕಛೇರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಚಿವರು ಸಂಘದ ಪ್ರಗತಿಯ ಬಗ್ಗೆ ಮಾತನಾಡಿ, ಸಂಘವು ಶತಮಾನ ಪೂರ್ಣಗೊಳಿಸಿರುತ್ತದೆ.
ಆದರೆ, ಸಂಸ್ಥೆಯು ವೈದ್ಯಕೀಯ ಕಾಲೇಜನ್ನು ಈವರೆವಿಗೂ ಪ್ರಾರಂಭಿಸದೇ ಇರುವ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ಕೂಡಲೇ ಕಾರ್ಯಪ್ರವೃತ್ತರಾಗಲು ಸಂಘದ ಅಧ್ಯಕ್ಷರಿಗೆ ಸೂಚಿಸಿದರು. ಈ ಸಂಬಂಧ ತಮ್ಮ ಸಹಾಯ ಹಸ್ತವನ್ನು ನೀಡುವುದಾಗಿ ಸಭೆಯಲ್ಲಿ ತಿಳಿಸಿದರು. ಸದರಿ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಅಲ್ಲಂ ಗುರುಬಸವರಾಜ ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳು ಮತ್ತು ಆಜೀವ ಸದಸ್ಯರುಗಳು ಹಾಗೂ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ನಗರದ ಮುಖಂಡರು ಉಪಸ್ಥಿತರಿದ್ದರು. ಸಚಿವರಿಗೆ ಗೌರವಪೂರ್ವಕವಾಗಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


