ಉಜಿರೆ: ಕಾನ್ಕೆಮ್ -ರಸಾಯನ ಶಾಸ್ತ್ರ ವಿಭಾಗದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Upayuktha
1 minute read
0


ಉಜಿರೆ: ಕೌಶಲ್ಯ ಹಾಗೂ ಸದೃಢವಾದ ಮನೋಭಾವ ಹೊಂದಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿದ್ಯಾರ್ಥಿಗಳು ಕೌಶಲ್ಯದ ಜೊತೆಯಲ್ಲಿ, ಸಾಧಿಸುವ ಮನೋಭಾವ ಕೂಡ ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಬಿ.ಕೆ. ಸರೋಜಿನಿ ಅವರು ಅಭಿಪ್ರಾಯ ಪಟ್ಟರು. 


ಉಜಿರೆಯ ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ 'ಕಾನ್ಕೆಮ್ -ರಸಾಯನ ಶಾಸ್ತ್ರ ವಿಭಾಗದ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು. 


ಆಧುನಿಕ ಜಗತ್ತಿನಲ್ಲಿ ರಸಾಯನಶಾಸ್ತ್ರವು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ಅದು ನಿರಂತರ ಬದಲಾವಣೆ ಬಯಸುತ್ತದೆ. ಇದರಲ್ಲಿ ಸಾಧನೆ ಮಾಡುವವರಿಗೆ ಸಾಕಷ್ಟು ಅವಕಾಶಗಳು ಇವೆ, ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ, ಸೃಜನಶೀಲ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ, ಆ ವಿಷಯದ ಕುರಿತು ಆಸಕ್ತಿ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳು  ಸಂವಹನ ಕಲೆಯನ್ನು ರೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಡೀನ್ ಹಾಗೂ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ವಿಶ್ವನಾಥ ಪಿ, ವಿಭಾಗದ ಎಲ್ಲಾ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾನ್ಕೆಮ್ ನ ಕಾರ್ಯದರ್ಶಿ ಆಗಿರುವ ಸಹ ಪ್ರಾಧ್ಯಾಪಕ ಡಾ. ನವೀನ್ ಕುಮಾರ್ ಜೈನ್ ಸ್ವಾಗತಿಸಿದರು, ಡಾ. ಸುಜಯ ಎಂ. ಎಂ ಸಹಾಯಕ ಪ್ರಾಧ್ಯಾಪಕರು ವಂದಿಸಿದರು. ವಿದ್ಯಾರ್ಥಿನಿ ಸೋನಾಕ್ಷಿ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top