ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯದಲ್ಲಿ ಶಾರದಾ ಪೂಜೆಯು ಅರ್ಚಕ ಕಟ್ಲ ಕೃಷ್ಣಮೂರ್ತಿ ಯವರ ನೇತೃತ್ವದಲ್ಲಿ ನಡೆಯಿತು. ಹಿಂದು ವಿದ್ಯಾದಾಯಿನೀ ಸಂಘದ ಅದ್ಯಕ್ಷ ಜಯಚಂದ್ರ ಹತ್ವಾರ್ ದೀಪ ಪ್ರಜ್ವಲಿಸುವ ಮೂಲಕ ಭಜನೆಗೆ ಚಾಲನೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ, ಕೃಷ್ಣಮೂರ್ತಿ ಹಿಂದು ವಿದ್ಯಾದಾಯಿನೀ ಸಂಘದ ಕಾರ್ಯದರ್ಶಿ ಶ್ರೀರಂಗ ಹೊಸಬೆಟ್ಟು, ಜತೆ ಕಾರ್ಯದರ್ಶಿ ರಾಮಚಂದ್ರ ರಾವ್, ಜತೆ ಕೋಶಾಧಿಕಾರಿ ಟಿ.ಯನ್ ರಮೇಶ್, ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಎಂ. ಗೋಪಾಲ ಗೋಖಲೆ, ಗೋವಿಂದ ದಾಸ ಕಾಲೇಜಿನ ಅಲುಮ್ನಿ ಅಸೋಸಿಯೇಶನ್‌ನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ರಮೇಶ ಭಟ್, ಎಸ್. ಜಿ. ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ, ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಸ್ಟಾಪ್ ಸೆಕ್ರೆಟರಿ ಗೀತಾ, ಕಛೇರಿ ಅಧೀಕ್ಷಕ ವೆಂಕಪ್ಪ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು. ಹಿತಾ ಉಮೇಶ ಅವರಿಂದ ಭರತನಾಟ್ಯ ಕಲಾಸೇವೆ, ವಿದ್ಯಾರ್ಥಿಗಳಿಂದ ಭಜನೆ, ನೃತ್ಯ ಭಜನೆ, ಜರುಗಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ