ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಇದರ ಆಶ್ರಯದಲ್ಲಿ ಅ15 ಮತ್ತು 16 ರಂದು ಶ್ರೀ ರಾಮಕೃಷ್ಣ ವಿದ್ಯಾ ಶಾಲ ಮೈಸೂರು ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟ 2024 - 25 ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಲಿಖಿತ್ ಎಚ್.ಕೆ ಇವರು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ಇವರು ಸೋಮವಾರಪೇಟೆ ನಿವಾಸಿ ಕೃಪಾಲಾ ಎಚ್. ಎಸ್ ಮತ್ತು ಶಮಂತಾ ಬಿ.ಎನ್ ದಂಪತಿಗಳ ಪುತ್ರ. ಇವರಿಗೆ ಗೌತಮ್ ಕಿರ್ಗಂದೂರು ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ