ಸುರತ್ಕಲ್: ಹಿಂದು ವಿದ್ಯಾದಾಯಿನೀ ಸಂಘ (ರಿ) ದ ಆಡಳಿತಕ್ಕೊಳಪಟ್ಟ ಸುರತ್ಕಲ್ ಗೋವಿಂದದಾಸ ಕಾಲೇಜಿನ ಮಾನವ ಹಕ್ಕುಗಳ ವೇದಿಕೆ, ಮಾನವಿಕ ವಿಭಾಗ, ಗ್ರಾಹಕ ಹಕ್ಕುಗಳ ವೇದಿಕೆ ಮತ್ತು ಮಹಿಳಾ ವೇದಿಕೆ ಹಾಗೂ ಆಂತರಿಕ ಗುಣಮಟ್ಟ ಖಾತರಿಕೋಶಗಳ ಸಹಭಾಗಿತ್ವದಲ್ಲಿ ಮಾನವ ಹಕ್ಕುಗಳು - ಇಶ್ಯೂಸ್ ಆ್ಯಂಡ್ ಕನ್ಸರ್ನ್ಸ್ ಕುರಿತಂತೆ ಸರಣಿ ಉಪನ್ಯಾಸ ಮಾಲಿಕೆಯನ್ನುಆಯೋಜಿಸಲಾಗಿದೆ. ಉಪನ್ಯಾಸ ಸರಣಿಯ ಉದ್ಘಾಟನೆಯನ್ನು ದಕ್ಷಿಣಕನ್ನಡಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ. ಪಿ. ಅವರು ಅಕ್ಟೋಬರ್ 30 ರಂದು ಪೂರ್ವಾಹ್ನ 10.00 ಗಂಟೆಗೆ ಗೋವಿಂದದಾಸ ಕಾಲೇಜಿನ ಸಭಾಭವನದಲ್ಲಿನೆರವೇರಿಸಲಿದ್ದು ಮಾನವ ಹಕ್ಕುಗಳ ರಕ್ಷಣೆಯಲ್ಲಿಉತ್ತಮ ಆಡಳಿತದ ಪಾತ್ರದಕುರಿತಂತೆವಿಶೇಷ ಉಪನ್ಯಾಸ ನೀಡಲಿದ್ದಾರೆ.
ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಹೆಚ್.ಜಯಚಂದ್ರ ಹತ್ವಾರ್ ಹಾಗೂ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ.ಗೋಖಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ ಪಿ.ಅಧ್ಯಕ್ಷತೆ ವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ