ಉಜಿರೆ: ಉನ್ನತ ಶಿಕ್ಷಣ ಹಾಗೂ ಸಂಶೋಧನೆಗಳಲ್ಲಿ ಸಂಖ್ಯಾಶಾಸ್ತ್ರದ ಸ್ಥಾನ ಮಹತ್ವದ್ದಾಗಿದೆ ಎಂದು ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್ (ಎನ್‌ಎಲ್‌ಪಿ)ನ ಕುರಿತಾಗಿ ಎಸ್‌ಡಿಎಂ ಐಟಿ ಕಾಲೇಜಿನ ಕೃತಕ ಬುದ್ಧಿಮತ್ತೆ ಹಾಗೂ ದತ್ತಾಂಶ ವಿಜ್ಞಾನ ವಿಭಾಗದ ಸಹಾಯಕ ಪ್ರಾದ್ಯಾಪಕ ಪ್ರೊ.ಪದ್ಮಪ್ರಸಾದ್ ಅಭಿಪ್ರಾಯಪಟ್ಟರು.
ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ಸಂಖ್ಯಾಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗವು ಆಯೋಜಿಸಿದ್ದ ಸ್ಟಾಟ್‌ಎಕ್ಸ್ಪ್ಲೋರ್ ಕಾರ್ಯಕ್ರಮ ಹಾಗೂ ವಿಭಾಗ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್ನಲ್ಲಿ ಅಂಕಿಅಂಶಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ ಹಾಗೂ ಸಂಶೋಧನೆ, ಅಧ್ಯಯನದ ಕುರಿತಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಸಂಖ್ಯಾಶಾಸ್ತ್ರದ ಮಾಡೆಲ್‌ಗಳು ಹಾಗೂ ಅಂಕಿಅಂಶಗಳ ಪ್ರಮೇಯಗಳುನ್ಯಾಚುರಲ್ ಲಾಂಗ್ವೇಜ್ ಪ್ರೋಸೆಸ್ಸಿಂಗಲ್ಲಿ ಅಳವಡಿಸಿಕೊಂಡಿರುವುದರ ಕುರಿತಾಗಿ ಮಾಹಿತಿ ನೀಡಿದರು.
ಎಸ್‌ಡಿಎಂ ಕಾಲೇಜಿನ ಡೀನ್ ಪ್ರೋ.ವಿಶ್ವನಾಥ್.ಪಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಖ್ಯಾಶಾಸ್ತ್ರವು ವಿವಿಧ ವಲಯಗಳಲ್ಲಿ ಬೇಡಿಕೆಯನ್ನು ವಿಸ್ತರಿಸುತ್ತಿದೆ. ವೈದ್ಯಕೀಯ ಹಾಗೂ ಸಂಶೋಧನಾ ವಿಭಾಗದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಖ್ಯಾಶಾಸ್ತ್ರ ವಿಭಾಗದ ಸ್ಟಾಟ್‌ಎಕ್ಸಪ್ಲೋರ್ ಅಸೋಸಿಯೇಷನ್ಸ್ ಉದ್ಘಾಟನೆಯಲ್ಲಿ ಮುಸಿಗ್ಮಾ ವಿಭಾಗದ ಬಿತ್ತಿಪತ್ರವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ, ಎಸ್, ಎನ್ ಕಾಕತ್ಕರ್, ವಿಭಾಗದ ಮುಖ್ಯಸ್ಥೆ ಡಾ.ಸವಿತಾ ಕುಮಾರಿ ಹಾಗೂ ಸಹ ಪ್ರಾದ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಖ್ಯಾಶಾಸ್ತ್ರ ವಿದ್ಯಾರ್ಥಿಗಳಾದ ಅನನ್ಯಾ ಕಾರ್ಯಕ್ರಮವನ್ನು ಸ್ವಾಗತಿಸಿ, ದಿವ್ಯಾ ಸುಧೀರ್ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


