ಸಿದ್ದರಾಮಯ್ಯ ರಾಜೀನಾಮೆ ಕಾಲ ಸನ್ನಿಹಿತ: ಶಾಸಕ ವೇದವ್ಯಾಸ ಕಾಮತ್

Upayuktha
0



ಮಂಗಳೂರು: ಮೂಡ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಗಿದ್ದು, ಇಷ್ಟು ದಿನ ನಾನು ಯಾವುದೇ ತಪ್ಪು ಮಾಡಿಲ್ಲ ಎನ್ನುತ್ತಾ ಇದೀಗ ಪ್ರಕರಣ ಬಿಗಿಯಾಗುತ್ತಾ ಹೋದಂತೆ ಅಕ್ರಮವಾಗಿ ಪಡೆದಿರುವ ನಿವೇಶನಗಳನ್ನು ಬೇಷರತ್ತಾಗಿ ತಮ್ಮ ಪತ್ನಿಯವರಿಂದ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿರುವುದೇ ಇದಕ್ಕೆ ಸಾಕ್ಷಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು.


ಇದು ಬಿಜೆಪಿ-ಜೆಡಿಎಸ್ ಸಂಘಟಿತವಾಗಿ ನಡೆಸಿದ ‘ಮೈಸೂರು ಚಲೋ’ ಪಾದಯಾತ್ರೆಗೆ ಸಿಕ್ಕಿರುವ ಜಯವಾಗಿದೆ. ಬಡವರ ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದು ಮಾತ್ರವಲ್ಲದೇ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವುಂಟು ಮಾಡಿದ್ದ ಈ ಪ್ರಕರಣದಲ್ಲಿ ಅಕ್ರಮದ ದಾಖಲೆಗಳು ಕಣ್ಣಿಗೆ ರಾಚುತ್ತಿದ್ದರೂ, ನಾನು ಯಾರಿಗೂ ಜಗ್ಗಲ್ಲ ಬಗ್ಗಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯನವರನ್ನು ಇದೀಗ ನ್ಯಾಯ ವ್ಯವಸ್ಥೆಯೇ ತಲೆಬಾಗಿಸಿದೆ. ಅದುವೇ ಈ ದೇಶದ ಪ್ರಜಾಪ್ರಭುತ್ವ ಹಾಗೂ ನ್ಯಾಯಾಂಗ ವ್ಯವಸ್ಥೆಯ ಶಕ್ತಿ ಎಂದರು.


ಸಿದ್ದರಾಮಯ್ಯನವರು ಇನ್ನಾದರೂ ತಮ್ಮ ಮೊಂಡು ಹಠ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಪ್ರಾಮಾಣಿಕವಾಗಿ ತನಿಖೆ ಎದುರಿಸಲಿ, ಅದರ ಜೊತೆಗೆ ರಾಜ್ಯಪಾಲರನ್ನು ಅವಹೇಳನ ಮಾಡಿದ ತಪ್ಪಿಗೆ ಇಡೀ ರಾಜ್ಯ ಕಾಂಗ್ರೆಸ್ ಸರ್ಕಾರ ಕ್ಷಮಾಪಣೆ ಕೋರಲಿ ಎಂದು ಆಗ್ರಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top