ಉಡುಪಿ: ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕ, ಓಕುಡೆ ಡಯಾಗ್ನೋಸಿಸ್ ಮತ್ತು ಡಯಾಲಿಸಿಸ್ ಸೆಂಟರ್ ಮತ್ತು ಲಯನ್ಸ್ ಕ್ಲಬ್ ಉಡುಪಿ ಮಿಡ್ ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಂಜಿಬೆಟ್ಟುವಿನ ಓಕುಡೆ ಕ್ಲಿನಿಕ್‌ನಲ್ಲಿ ಇತ್ತೀಚೆಗೆ ವಿಶ್ವ ಹೃದಯ ದಿನದ ಅಂಗವಾಗಿ ಉಚಿತ ಇಕೋ, ಇಸಿಜಿ ಹಾಗೂ ಆರ್‌ಬಿಎಸ್ ಪರೀಕ್ಷೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ಘಟಕದ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಮಾತನಾಡಿ, ಹೃದಯದ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎನ್ನುವ ಉದ್ದೇಶದಿಂದ ಅಂತರಾಷ್ಟ್ರೀಯ ಹೃದಯ ದಿನವನ್ನು ಆಚರಿಸಲಾಗುತ್ತಿದೆ ಎಂದರು.
ಲಯನ್ಸ್ ವಲಯಾಧ್ಯಕ್ಷ ಅನಂತ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಉಡುಪಿ ಮಿಡ್‌ಟೌನ್ ನಿರ್ದೇಶಕ ಪುರುಷೋತ್ತಮ ನಾಯಕ್, ಖಜಾಂಚಿ ರೇಖಾ ಶೆಟ್ಟಿ, ಡಾ. ಅಭಿನಯ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಾರ್ವಜನಿಕರು ಹೃದಯ ಪರೀಕ್ಷೆ, ಉಚಿತ ಫೆಬ್ರೋಸ್ಕಾನ್, ಲಿವರ್ ಮತ್ತು ಲಿಪಿಡ್ ಪ್ರೊಫೈಲ್ ಪರೀಕ್ಷೆಗಳನ್ನು ಮಾಡಿಸಿಕೊಂಡರು. ಹೃದಯ ಆರೋಗ್ಯದ ಕುರಿತಾಗಿ ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ