ಜಿಲ್ಲಾಮಟ್ಟದ ಖೋಖೋ ಪಂದ್ಯಾಟ - ವಿವೇಕಾನಂದ ಕಾಲೇಜಿನ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು:
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕಪಿತಾನಿಯ ಪದವಿಪೂರ್ವ ಕಾಲೇಜು, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ  ಪುತ್ತೂರು ತಾಲೂಕು ತಂಡವನ್ನು ಪ್ರತಿನಿಧಿಸಿದ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ತೃತೀಯ ಸ್ಥಾನವನ್ನು ಪಡೆದಿದ್ದು, ಪ್ರಥಮ ಪಿಯುಸಿಯ ಭವಿಷ್.ಜಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 


ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ವನೀಶ್‌, ಚಿಂತನ್‌, ಭವಿಷ್.ಜಿ, ಸೃಜನ್‌, ತರುಣ್‌, ಮಿಥುನ್‌ ಶೆಟ್ಟಿ ಎಸ್. ಎಲ್‌, ತೇಜಸ್‌ ಪಿ.ಕೆ, ಮನ್ವಿತ್‌, ಗೌತಮ್‌.ವಿ.ಅಂಚನ್‌, ಪ್ರೇಕ್ಷಿತ್‌ ಶೆಟ್ಟಿ ಎಮ್‌ ಹಾಗೂ ದ್ವಿತೀಯ ಪಿಯುಸಿಯ ಬಿ. ಗುರುಕಿರಣ್‌, ಜಿಷ್ಣು ಪ್ರಕಾಶ್‌ ಎ, ಓಂಕಾರ್‌ ಎಸ್. ಎಸ್‌ ಮತ್ತು ಕುಶಾಲ್‌.ಎನ್‌ ಭಾಗವಹಿಸಿದ್ದರು. 


ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top