ಕಾಂಗ್ರೆಸ್ ಕೃಪೆಯಿಂದ ಪೊಲೀಸ್ ಠಾಣೆಯಲ್ಲೂ ಮತಾಂಧರ ಅಟ್ಟಹಾಸ: ಶಾಸಕ ಕಾಮತ್ ಆಕ್ರೋಶ

Upayuktha
0


ಮಂಗಳೂರು: ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದಲ್ಲಿ ಎಲ್ಲೆಡೆ ಮತಾಂಧ ಜಿಹಾದಿಗಳ ಅಟ್ಟಹಾಸ ಮಿತಿ ಮೀರಿದ್ದು ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲೇ ಹಿಂದೂ ಮುಖಂಡರ ಮೇಲೆ ಹಲ್ಲೆಯಾಗುತ್ತಿರುವುದು ಜಿಲ್ಲೆಯಲ್ಲಿ ಹಿಂದೂಗಳ ಸುರಕ್ಷತೆ ಬಗ್ಗೆ ಆತಂಕಕಾರಿ ವಾತಾವರಣ ಸೃಷ್ಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


ಇಷ್ಟು ದಿನ ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಪೊಲೀಸರನ್ನು ಬಳಸಿಕೊಂಡು ಹಿಂದೂ ಕಾರ್ಯಕರ್ತರಿಗೆ ತೊಂದರೆ ನೀಡುತ್ತಿತ್ತು. ಇದೀಗ

ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಗೆ ಹೋಗಿದ್ದ ಬಜರಂಗದಳದ ಮುಖಂಡನ ಮೇಲೆ ಪೊಲೀಸ್ ನಿರೀಕ್ಷಕರ  ಸಮ್ಮುಖದಲ್ಲೇ ಮತಾಂಧನೊಬ್ಬ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದು ಪ್ರತಿಯೊಬ್ಬರಿಗೂ ರಕ್ಷಣೆ ನೀಡಬೇಕಾದ ಪೊಲೀಸ್ ಠಾಣೆಗಳೂ ಸಹ ಹಿಂದೂಗಳ ಪಾಲಿಗೆ ಸುರಕ್ಷಿತವಾಗಿಲ್ಲ ಎಂಬುದನ್ನು ತೋರಿಸಿಕೊಟ್ಟಿದೆ. ಇನ್ನು ಮೇಲೆ ಠಾಣೆಯಲ್ಲಿ ಕೊಲೆಯೇ ನಡೆದರೂ ಆಶ್ಚರ್ಯವಿಲ್ಲ. ಅಷ್ಟರಮಟ್ಟಿಗೆ ಕಾಂಗ್ರೆಸ್ ಸರ್ಕಾರ ಜಿಹಾದಿಗಳ ಬೆಂಬಲಕ್ಕೆ ನಿಂತಿದೆ ಎಂದು ವಾಗ್ದಾಳಿ ನಡೆಸಿದರು.


ನ್ಯಾಯ ಕೇಳಲು ಬಂದವರ ಮೇಲೆಯೇ ಹೀಗೆ ದೌರ್ಜನ್ಯ ನಡೆದರೆ ನ್ಯಾಯಕ್ಕಾಗಿ ಇನ್ನೆಲ್ಲಿ ಹೋಗಬೇಕು? ಹಿಂದೂಗಳ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ತಾಳ್ಮೆಯ ಕಟ್ಟೆಯೊಡೆದರೆ ಪರಿಣಾಮ ತೀಕ್ಷ್ಣವಾಗಿರಲಿದೆ. ಕೂಡಲೇ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು ಮತ್ತು ಹಲ್ಲೆ ನಡೆಸಿದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪದೇಪದೇ ಇಂತಹ ಘಟನೆಗಳಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದರೆ ಅದರ ನೇರ ಹೊಣೆಯನ್ನು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವೇ ಹೊರಬೇಕು ಎಂದು ಶಾಸಕರು ಎಚ್ಚರಿಸಿದರು.


ಇದೇ ಸಂದರ್ಭದಲ್ಲಿ ಶಾಸಕರು ಆಸ್ಪತ್ರೆಗೆ ಭೇಟಿ ನೀಡಿ ಹಿಂದೂ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top