ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Upayuktha
0



ಉಜಿರೆ: ಆರೋಗ್ಯಕರ ಜೀವನಕ್ಕೆ ಕೈಯ ಶುಚಿತ್ವವೂ ಕೂಡ ಅತಿ ಮುಖ್ಯ. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತಿ ವರ್ಷ 3.5 ಮಿಲಿಯನ್ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯುಮೋನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತವೆ. ಈಗ ಕೊರೋನ ವೈರಸ್ ಕೂಡ ಸೇರ್ಪಡೆಯಾಗಿದೆ. ಕೈಯ ಅಸುರಕ್ಷತೆ ಬಗ್ಗೆ ಕಳವಳಗೊಂಡ ವಿಶ್ವ ಆರೋಗ್ಯ ಸಂಸ್ಥೆಯು 2008 ರಿಂದ ವಿಶ್ವ ಕೈ ತೊಳೆಯುವ ದಿನವನ್ನಾಗಿ ಘೋಷಿಸಿದೆ.


ಇದೀಗ ಸುಮಾರು 70 ದೇಶಕ್ಕಿಂತಲೂ ಹೆಚ್ಚು ದೇಶಗಳಲ್ಲಿ ಕೈ ತೊಳೆಯುವ ದಿನದಂದು ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಬಗ್ಗೆ ತಿಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹೇಳಿದರು. 


ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನಡೆದ ವಿಶ್ವ ಕೈ ತೊಳೆಯುವ ದಿನಾಚರಣೆ ಪ್ರಯುಕ್ತ ವೈಜ್ಞಾನಿಕವಾಗಿ ಕೈ ತೊಳೆಯುವ ವಿಧಾನದ ಪ್ರಾತ್ಯಕ್ಷಿಕೆ ನಡೆಸಿ ಮಾತನಾಡಿದರು. 


ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ಶ್ರೀಹರಿ ಹಾಗೂ ಗೌತಮಿ ಜಿ. ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದರು. ಘಟಕದ ನಾಯಕ ಆದಿತ್ಯ ವಿ. ಸ್ವಾಗತಿಸಿ, ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top