ಉಜಿರೆ: ಶ್ರೀ ಧ. ಮಂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸುವರ್ಣ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಸುವರ್ಣ ಸಮ್ಮಿಲನ ಕಾರ್ಯಕ್ರಮವು ಅಕ್ಟೋಬರ್ 5ರಂದು ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸಲಿದ್ದಾರೆ. ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು. ಎನ್ಎಸ್ಎಸ್ ರಾಜ್ಯ ಯೋಜನಾಧಿಕಾರಿ ಡಾ. ಪ್ರತಾಪಲಿಂಗಯ್ಯ ಹಾಗೂ ಮಂಗಳೂರು ಎನ್ ಎಸ್ ಎಸ್ ಸಂಯೋಜಕ ಡಾ. ಶೇಷಪ್ಪ ಕೆ. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಅವರು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ