ಶಿಕ್ಷಕರನ್ನು ಪುನಃಶ್ಚೇತನ ಗೊಳಿಸಲು ತರಬೇತಿ ಕಾರ್ಯಾಗಾರಗಳು ಅತ್ಯವಶ್ಯಕ-ಅಲ್ಲಂ ಗುರು ಬಸವರಾಜ
ಬಳ್ಳಾರಿ: ವೀರಶೈವ ವಿದ್ಯಾವರ್ಧಕ ಸಂಘದ ವತಿಯಿಂದ ಸಂಘದ ಎಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರಿಗೆ ಎರಡು ದಿನದ ಕಾರ್ಯಾಗಾರವು ಕೊಟ್ಟರೂಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾರಂಭವಾಗಿದೆ.
ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಅಲ್ಲಂ ಗುರು ಬಸವರಾಜ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ನಿರುಪಯುಕ್ತ ವಸ್ತುಗಳನ್ನು ಮರು ಬಳಕೆ ಮಾಡಿದಂತೆ ಶಿಕ್ಷಕರನ್ನು ಪುನಃಶ್ಚೇತನ ಗೊಳಿಸುವಲ್ಲಿ ಈ ಕಾರ್ಯಾಗಾರಗಳು ಅತ್ಯುತ್ತಮವಾಗಿವೆ. ತಾವುಗಳು ಈಗಾಗಲೇ ಬುದ್ಧಿವಂತರಾಗಿದ್ದೀರಿ ಕಾಲಕ್ಕೆ ತಕ್ಕಂತೆ ನಾವೆಲ್ಲರೂ ಅಪ್ಡೇಟ್ ಆಗುವುದು ಅತ್ಯವಶ್ಯಕ ಈ ಹಿನ್ನೆಲೆಯಲ್ಲಿ ನಮ್ಮ ಸಂಘವು ಹಮ್ಮಿಕೊಂಡಿರುವ ಈ ತರಬೇತಿ ಕಾರ್ಯಗಾರವನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಹಾರೈಸಿದರು.
ವೀರಶೈವ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿಗಳಾದ ಬೈಲುವದ್ದೀಗೇರಿ ಎರ್ರಿಸ್ವಾಮಿ ಅವರು ಕಾರ್ಯಕ್ರಮದ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳಲ್ಲಿ, ಹೊಸ ಹೊಸ ಬೋಧನಾ ಪದ್ಧತಿಗಳು ಹಾಗೂ ಬೋಧನಾ ಕೌಶಲ್ಯಗಳ ಜ್ಞಾನವನ್ನು ಪಡೆದು ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬೇಕೆಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ಬೆಂಗಳೂರಿನ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಸುಶ್ಮಿತಾ ವಿನೋದ್ ಮತ್ತು ಶ್ರೀಮತಿ ಸುಮ ಅನಂತ್ ರವರು ವಿದ್ಯಾರ್ಥಿಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವವಾದದ್ದು, ಸತತ ಪರಿಶ್ರಮ ಹಾಗೂ ನಿರಂತರ ಪ್ರಯತ್ನದಿಂದ ಮಾತ್ರ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬಹುದು ಎಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಶರಣಬಸವನಗೌಡ ಅವರು ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ತಾವು ಪಡೆದುಕೊಳ್ಳುವ ಜ್ಞಾನವನ್ನು ಮಕ್ಕಳಿಗೆ ನೀಡಿ ಗುಣಾತ್ಮಕ ಶಿಕ್ಷಣವನ್ನು ಹೆಚ್ಚಿಸಬೇಕೆಂದು ತಿಳಿಸಿದರು.
ಈ ಕಾರ್ಯಗಾರದಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಸಹ ಕಾಯದರ್ಶಿಯಾದ ಯಾಳ್ಪಿ ಮೇಟಿ ಪಂಪನಗೌಡ, ವೀರಶೈವ ವಿದ್ಯಾವರ್ಧಕ ಸಂಘದ ವಿವಿಧ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅನ್ನಪೂರ್ಣ ಅವರು ಪ್ರಾರ್ಥನೆ ಸಲ್ಲಿಸಿದರು. ಸಹಾಯಕ ಪ್ರಾಧ್ಯಾಪಕರಾದ ಡಾ. ವಿಕ್ರಂ ಪಿ ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲರಾದ ಡಾ. ಸತೀಶ್ ಎ. ಹಿರೇಮಠ ವಂದನಾರ್ಪಣೆ ಸಲ್ಲಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ