ವೃತ್ತಿನಿಷ್ಠೆ ಬೆಳೆಸಿಕೊಂಡಾಗ ಹೆಸರು ಉಳಿಸಿಕೊಳ್ಳಲು ಸಾಧ್ಯ: ಪ್ರಭಾಕರ ಪ್ರಭು

Upayuktha
0

 ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶ್ರದ್ದಾಂಜಲಿ ಸಭೆ




ಬಂಟ್ವಾಳ: ಸಾರ್ವಜನಿಕ ಸೇವೆಯಲ್ಲಿರುವ ವ್ಯಕ್ತಿಗಳು ವೃತ್ತಿ ನಿಷ್ಠೆಯೊಂದಿಗೆ ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಸಮಾನತೆ ಯಿಂದ ಬೆರೆತುಕೊಂಡಾಗ ನಿರಂತರವಾಗಿ ಹೆಸರು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟರು.


ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 33 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡು ಇತ್ತೀಚಿಗೆ ದೈವಾಧೀನರಾಗಿರುವ ದಿವಂಗತ ಕೆ. ಶೀನ ಶೆಟ್ಟಿಯವರ ಆತ್ಮಕ್ಕೆ ಚಿರಶಾಂತಿ ಕೋರಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣ ಏರ್ಪಡಿಸಲಾದ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಸಹಕಾರ ಸಂಘದ ಮಾಜಿ ಅಧ್ಯಕ್ಷ ಪದ್ಮರಾಜ್ ಬಳ್ಳಾಲ್ ಮಾತನಾಡಿ, ದಿವಂಗತರು ಸ್ವಲ್ಪ ನಿಷ್ಠುರ ಸ್ವಭಾವದಿಂದ ಇದ್ದರೂ ಸಹ ಅವರ ಭಾವನೆ ಸಂಘದ ಏಳಿಗೆಗಾಗಿ ಮೀಸಲಾಗಿತ್ತು ಎಂದರು.


ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷ  ಎ. ಗೋಪಿನಾಥ ರೈ, ಮಾಜಿ ಉಪಾಧ್ಯಕ್ಷ ಎಸ್. ಅರ್ಕಕೀರ್ತಿ ಇಂದ್ರ, ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ ಮೃತರ ಕುರಿತು ನುಡಿನಮನ ಸಲ್ಲಿಸಿದರು.


ವೇದಿಕೆಯಲ್ಲಿ ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರತ್ನ ಕುಮಾರ್ ಚೌಟ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ ಕುಮಾರ್ ರಾಯಿಬೆಟ್ಟು, ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರತಿ ಶೆಟ್ಟಿ, ಮೃತರ ಸುಪುತ್ರ ಆಶೀಶ್ ಶೆಟ್ಟಿ ಉಪಸ್ಥಿತರಿದ್ದರು.


ಸಂಘದ ಸದಸ್ಯರಾದ ಶಶಿಧರ್ ರೈ, ಜಗದೀಶ್ ಆಳ್ವಾ, ಸಂಘದ ನಿವೃತ್ತ ಲೆಕ್ಕಿಗ ನಾಗರಾಜ್ ಭಂಗ ಮತ್ತಿತರರು ಮೃತರ ಬಗ್ಗೆ ನುಡಿನಮನ ಸಲ್ಲಿಸಿದರು.


ಸಭೆಯಲ್ಲಿ ಸಂಘದ ನಿರ್ದೇಶಕ ಸಂದೇಶ್ ಶೆಟ್ಟಿ ಪೊಡಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಜಾರಪ್ಪ ನಾಯ್ಕ್, ಉಮೇಶ್ ಗೌಡ, ದೇವರಾಜ ಸಾಲಿಯಾನ್,  ಅರುಣಾ ಎಸ್ ಶೆಟ್ಟಿ, ಮಂದಾರತಿ ಎಸ್ ಶೆಟ್ಟಿ, ವೃತ್ತಿಪರ ನಿರ್ದೇಶಕ ಮಾಧವ ಶೆಟ್ಟಿಗಾರ್, ಮಾಜಿ ನಿರ್ದೇಶಕ ಸೀತಾರಾಮ ಶೆಟ್ಟಿ, ವಸಂತ ಗೌಡ, ಪ್ರಮುಖರಾದ ಲೋಕೇಶ್ ಶೆಟ್ಟಿ ಸಿದ್ದಕಟ್ಟೆ ಜಯರಾಮ ಅಡಪ, ಜಗತ್ ಪಾಲ ಶೆಟ್ಟಿ, ರಶ್ಮಿತ್ ಶೆಟ್ಟಿ, ಲಕ್ಸ್ಮಿದರ ಶೆಟ್ಟಿ ಪುರಂದರ ಭಟ್, ಹರಿಪ್ರಸಾದ್ ಶೆಟ್ಟಿ ಸೇರಿದಂತೆ ಹಲವಾರು ಅಭಿಮಾನಿ, ಹಿತೈಷಿಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.




إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top