ಸುರತ್ಕಲ್: ಪ್ರಸಕ್ತ ಸಂದರ್ಭದಲ್ಲಿ ಶಾಸ್ತ್ರೀಯ ಸಂಗೀತದಲ್ಲಿ ಯುವ ಕಲಾವಿದರು ವಿಶಿಷ್ಟ ಸಾಧನೆ ಮಾಡುತ್ತಿದ್ದಾರೆ. ಯುವ ಕಲಾವಿದರಿಗೆ ವೇದಿಕೆ ಕಲ್ಪಿಸಿ ಕೊಡುವ ಮೂಲಕ ಅವರ ಪ್ರತಿಭೆಯ ಪ್ರಕಾಶನಕ್ಕೆ ಸಾಮಾಜಿಕ ಸಂಸ್ಥೆಗಳು ಸಹಕಾರಿಗಳಾಗಬೇಕು ಎಂದು ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ನುಡಿದರು. ಅವರು ಮಣಿಕೃಷ್ಣ ಸ್ವಾಮಿ ಅಕಾಡೆಮಿ(ರಿ) ಮತ್ತು ನಾಗರಿಕ ಸಲಹಾ ಸಮಿತಿ(ರಿ) ಸುರತ್ಕಲ್ ಇವರು ಸುರತ್ಕಲ್‌ನ ಮೇಲು ಸೇತುವೆಯ ತಳಭಾಗದ ಎಂ.ಸಿ.ಎಫ್ ನಾಗರಿಕ ಸಲಹಾ ಸಮಿತಿ ಸಾಂಸ್ಕೃತಿಕ ವೇದಿಕೆಯಲ್ಲಿ ಆಯೋಜಿಸುತ್ತಿರುವ ಉದಯರಾಗ ಕಾರ್ಯಕ್ರಮ ಸರಣಿಯ ಉದಯರಾಗ–56 ರಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಚೆನ್ನೈಯ ನಮೃತಾ ಎಸ್ ಅವರಿಂದ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ ನಡೆಯಿತು ವಯಲಿನ್‌ನಲ್ಲಿ ಅನನ್ಯ ಪಿ.ಎಸ್. ಪುತ್ತೂರು ಹಾಗು ಮೃದಂಗದಲ್ಲಿ ಅಚಿಂತ್ಯ ಕೃಷ್ಣ ಪುತ್ತೂರು ಸಹಕರಿಸಿದರು. ಮಣಿಕೃಷ್ಣ ಸ್ವಾಮಿ ಅಕಾಡೆಮಿ(ರಿ)ಯ ಕಾರ್ಯದರ್ಶಿ ಪಿ.ನಿತ್ಯಾನಂದ ರಾವ್ ಮಾತನಾಡಿ ಕನ್ನಡ ಕೃತಿಗಳನ್ನು ಆಧಾರಿಸಿ ಪೂರ್ಣ ಪ್ರಮಾಣದಲ್ಲಿ ಸಂಗೀತ ಕಛೇರಿ ನಡೆಸುವ ಮೂಲಕ ನಮೃತಾ ಎಸ್ ತಮ್ಮ ಪ್ರತಿಭೆ ತೋರ್ಪಡಿಸಿದ್ದಾರೆ ಎಂದರು. ನಾಗರಿಕ ಸಹಾ ಸಮಿತಿಯ ಅಧ್ಯಕ್ಷ ಡಾ.ಕೆ.ರಾಜಮೋಹನ್‌ರಾವ್, ಸಂಯೋಜಕ ಸತೀಶ್ ಸದಾನಂದ್, ಸಂಗೀತ ಗುರುಗಳಾದ ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್, ಶ್ರೀನಿವಾಸ ರಾವ್, ಪ್ರೊ. ಪಿ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.jpg)
