38ನೇ ಅಖಿಲ ಭಾರತ ಅಂಚೆ ಬ್ಯಾಡ್ಮಿಂಟನ್ ಪಂದ್ಯಾವಳಿ
ಬೆಂಗಳೂರು: 38ನೇ ಅಖಿಲ ಭಾರತ ಅಂಚೆ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ವಿಭಾಗದಲ್ಲಿ ತಮಿಳುನಾಡು ತಂಡವು ಕೇರಳ ತಂಡವನ್ನು 3-2 ಅಂತರದಿಂದ ಸೋಲಿಸಿ ಟೀಮ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡಿದ್ದಾರೆ.
ಚಾಮುಂಡಿ ವಿಹಾರ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಭಾಗದ ಫೈನಲ್ಸ್ ತೀವ್ರ ಪೈಪೋಟಿಯಿಂದ ನಡೆದಿದ್ದು, ಕೊನೆಯ ಕ್ಷಣದ ತನಕವೂ ರೋಚಕವಾಗಿತ್ತು. ತಮಿಳುನಾಡು ತಂಡದ ಎಸ್ ಸುಬ್ರಮಣಿಯನ್ ಮತ್ತು ಇ.ಯುವರಾಜ್ ಅವರ ಉತ್ತಮ ಪ್ರದರ್ಶನದ ಮೂಲಕ ಕೇರಳ ತಂಡವನ್ನು 3-2 ಅಂತರದಿಂದ ಸೋಲಿಸಿ ಟೀಮ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡಿದ್ದಾರೆ.
ಪಂದ್ಯಗಳ ವಿವರ:
ಪ್ರೀ ಕ್ವಾರ್ಟರ್ ಲೀಗ್ ನಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ 29 ಪಂದ್ಯಗಳು, ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 26 ಪಂದ್ಯಗಳು, ಪುರುಷರ ಡಬಲ್ಸ್ ವಿಭಾಗದಲ್ಲಿ 11 ಪಂದ್ಯಗಳು, ಮಹಿಳೆಯರ ಡಬಲ್ಸ್ ವಿಭಾಗದಲ್ಲಿ 6 ಪಂದ್ಯಗಳು, ಮಿಶ್ರ ಡಬಲ್ಸ್ ವಿಭಾಗದಲ್ಲಿ 8 ಪಂದ್ಯಗಳು ಮತ್ತು 45 ವರ್ಷ ಮೇಲ್ಪಟ್ಟ ಪುರುಷರ ಸಿಂಗಲ್ಸ್ ವಿಭಾಗದಲ್ಲಿ 11 ಪಂದ್ಯಗಳು, 45 ವರ್ಷ ಮೇಲ್ಪಟ್ಟ ಪುರುಷರ ಡಬಲ್ಸ್ ವಿಭಾಗದಲ್ಲಿ 1 ಪಂದ್ಯ ಸೇರಿದಂತೆ ಒಟ್ಟು 92 ಪಂದ್ಯಗಳು ನಡೆದಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ