ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ನವೆಂಬರ್ 15ರಂದು ಉದ್ಘಾಟನೆಗೊಂಡಿತು.
ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಗುಂಡೆಸೆತದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಆಡಳಿತ ಮಂಡಳಿ ಸದಸ್ಯ ಎ. ಗೋವಿಂದರಾಯ ಶೆಣೈ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಕಾಲೇಜಿನ ವಿದ್ಯಾರ್ಥಿ ನಾಯಕ ಮೊಹಮ್ಮದ್ ಅಫ್ಲಾಹ್ ಕ್ರೀಡಾ ಪ್ರತಿಜ್ಞೆ ಬೋಧಿಸಿದರು. ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಸ್ವಾಗತಿಸಿ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಟಿ. ಆರ್. ನಾಯ್ಕ್ ವಂದಿಸಿದರು. ಕನ್ನಡ ಉಪನ್ಯಾಸಕ ಕೆ. ಶೀನಪ್ಪ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಗೌಡ ಕೆ. ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಪಿ. ಉದಯಕೃಷ್ಣ ಭಟ್ ನೇತೃತ್ವ ವಹಿಸಿದ್ದರು.
ಜನತಾ ಪದವಿಪೂರ್ವ ಕಾಲೇಜು, ಜನತಾ ಪ್ರೌಢಶಾಲೆ, ಜನತಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜನತಾ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಸ್ವಯಂಸೇವಕರು ಸಹಕರಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ