ಬೆಂಗಳೂರು: ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆಯಿಂದ ನವೆಂಬರ್ 17, 18 ರಂದು ಆರನೆಯ ಅಖಿಲ ಭಾರತ ಹರಿದಾಸ ಸಾಹಿತ್ಯ ಸಮ್ಮೇಳನ ಐಟಿಐ ಲೇಔಟ್ ನ ಪೂರ್ಣಪ್ರಜ್ಞ ವಿದ್ಯಾಪೀಠದ ಶ್ರೀಕೃಷ್ಣ ಸಮೂಹ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಎಚ್.ಬಿ. ಲಕ್ಷ್ಮೀನಾರಾಯಣ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ 17ರಂದು ಶ್ರೀಮದಾರ್ಯ ಅಕ್ಷೋಭ್ಯರಾಮಪ್ರಿಯ ತೀರ್ಥ ಶ್ರೀಪಾದಂಗಳವರು ಸಮ್ಮೇಳನ ಮಾಡುವರು. ಸಮ್ಮೇಳನದ ಅಧ್ಯಕ್ಷತೆಯನ್ನು ಡಾ.ಅರಳುಮಲ್ಲಿಗೆ ಪಾರ್ಥಸಾರಥಿಯವರು ವಹಿಸಲಿದ್ದಾರೆ. ಅಮೆರಿಕದ ಯೋಗಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ವಿ. ವೆಂಕಟಕೃಷ್ಣಶಾಸ್ತ್ರ, ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ. ಪರಮಶಿವ ಮೂರ್ತಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ನ.18 ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಬೇಲಿ ಮಠಾಧೀಶ ಶಿವರುದ್ರ ಮಹಾಸ್ವಾಮೀಜಿ, ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ, ಬ್ರಾಹ್ಮಣ ಅಭಿವೃದ್ಧಿ ನಿಗಮದ ಅಸಗೋಡು ಜಯಸಿಂಹ ಸೇರಿ ಗಣ್ಯರು ಪಾಲ್ಗೊಳ್ಳುವರು. ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಮೈತ್ರೇಯಿ ಮಹಿಳಾ ಹರಿದಾಸ ಟ್ರಸ್ಟ್ ನ ಸದಸ್ಯೆಯರು ಈ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಸಾಹಿತ್ಯಾಸಕ್ತರೆಲ್ಲ ಪಾಲ್ಗೊಂಡು ಈ ಸಮಾರಂಭವನ್ನು ಯಶಸ್ವಿಗೊಳಿಸಬೇಕೆಂದು ಕೋರಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ