ಬಾಲ್‌ ಬ್ಯಾಡ್ಮಿಂಟನ್: ಆಳ್ವಾಸ್‌ಗೆ 19ನೇ ಬಾರಿಗೆ ಅವಳಿ ಪ್ರಶಸ್ತಿ

Upayuktha
0

ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ



ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ತಂಡವನ್ನು 35-20, 35-5 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. 


ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ತಂಡವನ್ನು 35-12, 35-10 ಅಂಕಗಳಿಂದ ಸೋಲಿಸಿ 19ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಆಳ್ವಾಸ್ ಬಾಲಕರ ವಿಭಾಗದಲ್ಲಿ ಆಕಾಶ್ ಉತ್ತಮ ರಕ್ಷಣಾಕಾರ, ಲಿಖಿತ್ ಉತ್ತಮ ಆಕ್ರಮಣಕಾರ ಹಾಗೂ ಬಾಲಕಿಯರ ವಿಭಾಗದಲ್ಲಿ ಲಾಂಛನ ಉತ್ತಮ ರಕ್ಷಣಾಕರ‍್ತಿ, ಶಾಲಿನಿ ಉತ್ತಮ ಆಕ್ರಮಣಕಾರ್ತಿ ಪ್ರಶಸ್ತಿ ಪಡೆದರು.


ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top