ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿನಿ, 9ನೇ ತರಗತಿಯ ನಿಹಾರಿಕಾ ಎಂ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ), ಹಾಗೂ ದ.ಕ., ಉಡುಪಿ, ಉತ್ತರ ಕನ್ನಡ, ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಜ್ಞಾನ ವರ್ಷಿಣಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನದ ಆಧಾರದಲ್ಲಿ ನವಂಬರ್ 5 ರಂದು ನಡೆದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಚಾರ್ಯೆ ಮಾಲತಿ ಡಿ. ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


