ಅಥ್ಲೆಟಿಕ್ಸ್: ಆಳ್ವಾಸ್ ಶಾಲೆಗೆ 11 ಪದಕದೊಂದಿಗೆ ತಂಡ ಪ್ರಶಸ್ತಿ

Chandrashekhara Kulamarva
0

ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ


ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಜಿಲ್ಲೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 14 ವರ್ಷ ವಯೋಮಿತಿಯ ಪ್ರಾಥಮಿಕ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 03 ಚಿನ್ನ, 06 ಬೆಳ್ಳಿ ಮತ್ತು 02 ಕಂಚಿನ ಪದಕಗಳೊಂದಿಗೆ 11 ಪದಕದೊಂದಿಗೆ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿ ಪಡೆದುಕೊಂಡಿತು.  


ಫಲಿತಾಂಶ:

ಪ್ರೌಢ ಶಾಲಾ 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ: ಅಮೂಲ್ಯ - 80 ಮೀ ಹರ್ಡಲ್ಸ್ (ಪ್ರಥಮ), 4 X 100ಮೀ ರಿಲೇ (ದ್ವಿತೀಯ), ಪ್ರೇಕ್ಷಾ ಎಲ್ ಗೌಡ – ಎತ್ತರ ಜಿಗಿತ (ದ್ವಿತೀಯ), ಅನುಶ್ರೀ – 600ಮೀ (ದ್ವಿತೀಯ), ಕೌಶಿಕ್ - 80 ಮೀ  ಹರ್ಡಲ್ಸ್ (ಪ್ರಥಮ), ಉದ್ದ ಜಿಗಿತ (ತೃತೀಯ), ಲೋಹಿತ್ ಗೌಡ – ಗುಂಡು ಎಸೆತ (ಪ್ರಥಮ), ಸುಭಾಷ್ - 80 ಮೀ ಹರ್ಡಲ್ಸ್ (ತೃತೀಯ), ಅನುಶ್ರೀ - 4 X 100 ಮೀ ರಿಲೇ (ದ್ವಿತೀಯ), ಸುಜಾತ - 4 X 100ಮೀ ರಿಲೇ (ದ್ವಿತೀಯ), ರಕ್ಷಿತಾ - 4 X 100ಮೀ ರಿಲೇ (ದ್ವಿತೀಯ) ಸ್ಥಾನ ಪಡೆದರು.


ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಒಂದೇ ಶಾಲೆಯಿಂದ 05 ಕ್ರೀಡಾಪಟುಗಳು ಆಯ್ಕೆಯಾಗಿರುವುದು ಉಲ್ಲೇಖನೀಯ.


ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವರು ಅಭಿನಂದನೆ ಸಲ್ಲಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top