ಬಾಲ್‌ ಬ್ಯಾಡ್ಮಿಂಟನ್‌: ವಿಪಿಯು ಕಾಲೇಜಿನ ಹೇಮಂತ್‌ ಆರ್‌ ಗೌಡ ರಾಜ್ಯಮಟ್ಟಕ್ಕೆ

Upayuktha
0


ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ರೋಟರಿ ಪದವಿಪೂರ್ವ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಬಾಲ್‌ಬ್ಯಾಡ್ಮಿಂಟನ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ನಾಲ್ಕನೇ ಸ್ಥಾನವನ್ನು ಪಡೆದಿರುತ್ತಾರೆ.

ತಂಡದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಹೇಮಂತ್‌ ಆರ್‌ ಗೌಡ, ವೇದಾಂತ್‌ಎಸ್.ವಿ, ಕೆ ವೈಭವ್‌ರೈ, ತನೀಶ್‌ಕುಮಾರ್‌ಬಿ, ಮನೀಶ್‌ಡಿ.ವಿ, ಅಜೇಯ್‌ಎಸ್.ಕೆ, ದೈವಿಕ್‌ಜಿ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಧನುಷ್‌. ಎಸ್ ಎಸ್‌ಭಾಗವಹಿಸಿದ್ದರು.


ತಂಡವನ್ನು ಪ್ರತಿನಿಧಿಸಿದ ಪ್ರಥಮ ವಿಜ್ಞಾನ ವಿಭಾಗದ ಹೇಮಂತ್‌ ಆರ್‌ ಗೌಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ.ಜ್ಯೋತಿ ಮತ್ತು ಯತೀಶ್‌ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ.


ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.  



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top