ಬಳ್ಳಾರಿ: ಬಳ್ಳಾರಿಯ ಆರ್ಯ ವೈಶ್ಯ ಅಸೋಸಿಯೇಷನ್ ಮತ್ತು ಶ್ರೀ ರಾಮಕೃಷ್ಣ ವಿವೇಕಾನಂದ ಕೇಂದ್ರ ಸಹಯೋಗದಲ್ಲಿ ಬ್ರಹ್ಮಶ್ರೀ ಚಾಗಂಟಿ ಕೋಟೇಶ್ವರ್ ರಾವ್ ಅವರ ಪ್ರವಚನಗಳ ಕಾರ್ಯಕ್ರಮವನ್ನು ನವಂಬರ್ 26, 27 ಮತ್ತು 28 ರಂದು ಮೂರು ದಿನಗಳ ಕಾಲ ಸಂಜೆ 5.30 ರಿಂದ ರಾತ್ರಿ 8 ಗಂಟೆಯ ವರೆಗೆ ಸಿರುಗುಪ್ಪ ರಸ್ತೆಯ ಹವಂಭಾವಿಯ ಅನೂಪ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಯಾವುದೇ ಟಿಕೆಟ್ ಇಲ್ಲದೇ, ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ಆರ್ಯ ವೈಶ್ಯ ಅಸೋಸಿಯೇಷನ್ ಕಾರ್ಯದರ್ಶಿ, ಅಭಯ ಫೌಂಡೇಷನ್‌ನ ಅಧ್ಯಕ್ಷ ರಾಮಕೃಷ್ಣ ರೇಣಿಗುಂಟ್ಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಬಳ್ಳಾರಿ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು, ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ