ನಡ ಸ.ಪ.ಪೂ ಕಾಲೇಜು ರೇಂಜರ್ಸ್ ಘಟಕದಿಂದ ಸಾಂತ್ವನ ಕಾರ್ಯಕ್ರಮ

Chandrashekhara Kulamarva
0


ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಇಂದು ನಡ ಸರಕಾರೀ ಪದವಿ ಪೂರ್ವ ಕಾಲೇಜಿನ ಕಲ್ಪನಾ ಚಾವ್ಲಾ ರೇಂಜರ್ಸ್ ಘಟಕದ ವತಿಯಿಂದ ವಿಶಿಷ್ಟ ಕಾರ್ಯಕ್ರಮ ನಡೆಯಿತು.


ಮಕ್ಕಳಲ್ಲಿ ಸೇವಾ ಮನೋಭಾವವನ್ನು ಬೆಳೆಸುವ ಪ್ರಯತ್ನವಾಗಿ ಹಾಗೂ ನೊಂದವರ ನೋವಿಗೆ ಸ್ಪಂದಿಸುವ ಗುಣವನ್ನು ರೂಢಿಸುವ ನಿಟ್ಟಿನಲ್ಲಿ ಪಾರ್ಶ್ವವಾಯು ಪೀಡಿತರೊಬ್ಬರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುವ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲ ಚಂದ್ರಶೇಖರ್ ಇವರು ಉಪಸ್ಥಿತರಿದ್ದರು.


ಪ್ರಾಂಶುಪಾಲರು, ರೇಂಜರ್ ಲೀಡರ್ ವಸಂತಿ ಪಿ., ಹಾಗೂ ಎಲ್ಲಾ ರೇಂಜರ್ಸ್ ಗಳ ನೆರವಿನಿಂದ 12,000 ರೂಪಾಯಿಗಳನ್ನು, ಹಣ್ಣು ಹಂಪಲುಗಳನ್ನು, ಅವಶ್ಯಕ ಬಟ್ಟೆ ಬರೆಗಳನ್ನು ವಿತರಿಸಲಾಯಿತು. ಅವರ ಸಮಕ್ಷಮದಲ್ಲೇ ಸ್ಕೌಟ್ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಕಾಲ್ನಡಿಗೆಯ ಮೂಲಕ ಪ್ರಕೃತಿಯ ಮಡಿಲಲ್ಲಿ ಸಾಗಿ ಪುಟ್ಟ ಚಾರಣದ ಅನುಭವವಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top