ಎಸ್.ಜಿ.ಎಫ್.ಐ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟ
ಪುತ್ತೂರು: ಕೊಲ್ಕತ್ತಾದಲ್ಲಿ ನಡೆದ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ದ 68ನೇ ರಾಷ್ಟ್ರಮಟ್ಟದ ಚೆಸ್ ಪಂದ್ಯಾಟದಲ್ಲಿ ಕರ್ನಾಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್ ವೈಯಕ್ತಿಕ ವಿಭಾಗದಲ್ಲಿ ಕಂಚಿನ ಪದಕ ಪಡೆದಿರುತ್ತಾರೆ.
ಇವರು ಪುತ್ತೂರಿನ ದಿನೇಶ್ ಪ್ರಸನ್ನ ಹಾಗೂ ಉಮಾ ಡಿ ಪ್ರ ಸನ್ನಇವರ ಪುತ್ರ . ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ