ಚೆಸ್‌ ಪಂದ್ಯಾಟ: ಧನುಷ್ ರಾಮ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ  ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ  ರಾಜ್ಯಮಟ್ಟದ ಚೆಸ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಧನುಷ್ ರಾಮ್‌ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಎರಡನೇ ಬಾರಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು   ಪಡೆದಿರುತ್ತಾರೆ. 


ಇವರು ಕೊಲ್ಕತ್ತದಲ್ಲಿ ನಡೆಯಲಿರುವ ಸ್ಕೂಲ್‌ ಗೇಮ್ಸ್‌ ಫೆಡರೇಶನ್‌ ಓಫ್‌ ಇಂಡಿಯಾ(SGFI) ನಡೆಸುವ ರಾಷ್ಟ್ರ ಮಟ್ಟದ ಚೆಸ್‌ ಸ್ಪರ್ಧೆಗೆ ಕರ್ನಾಟಕ ತಂಡದ ನಾಯಕನಾಗಿ ಆಯ್ಕೆಯಾಗಿರುತ್ತಾರೆ. ಇವರು ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top