ಕಾಂಗ್ರೆಸ್ ನವರಿಗೆ ಮತ ಕೇಳುವ ನೈತಿಕ ಹಕ್ಕು ಇಲ್ಲ- ಬಿ.ಎಸ್.ಯಡಿಯೂರಪ್ಪ

Upayuktha
0



ಬಳ್ಳಾರಿ:ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ಪರವಾಗಿ ಇಂದು ಕ್ಷೇತ್ರದ ಬೊಮ್ಮಘಟ್ಟ, ಜೋರ ನೂರು ಮೊದಲಾದ ಗ್ರಾಮಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಅವರೊಂದಿಗೆ ರೋಡ್ ಶೋ ನಡೆಸಿ  ಮತ ಯಾಚಿಸಿದರು.


ಅವರು ಮಾತನಾಡುತ್ತಾ ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸ್ವತಃ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮೂಡ ನಿವೇಶನ ಹಗರಣದಲ್ಲಿ ಪಾಲ್ಗೊಂಡಿದ್ದಾರೆ. ಅವರಿಗೆ ಒಂದು ನಿಮಿಷ ಸಹ ಮುಖ್ಯಮಂತ್ರಿಯಾಗಿ ಮುಂದುವರೆಯುವ ನೈತಿಕ ಹಕ್ಕಿಲ್ಲ ಎಂದರು. 


ಇಷ್ಟೇ ಅಲ್ಲದೆ ಸರಕಾರ ಬಡ ಜನರಿಗೆ ಸೇರಬೇಕಾದ ಹಣವನ್ನು ಚುನಾವಣಾ ವೆಚ್ಚ ಮಾಡಲು ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆಸಿದೆ. ಪಂಚ ಗ್ಯಾರೆಂಟಿ ಬಗ್ಗೆ ಹೇಳುತ್ತಿದ್ದಾರೆ. ಅವರು ಈ ಉಪ ಚುನಾವಣೆ ನಂತರ ಇವನ್ನು ನಿಲ್ಲಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ. ಅದಕ್ಕಾಗಿ ನೀವು ಈ ಸಂಡೂರು ಕ್ಷೇತ್ರ ದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿ. ಈ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕೆಂದು ಮತದಾರರಲ್ಲಿ‌ ಮನವಿ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top