ಸಂಡೂರಿನಲ್ಲಿ ಕಾಂಗ್ರೆಸ್‌ ಗೆಲುವು: ಸಂತೋಷ್ ಲಾಡ್ ಶ್ರಮಕ್ಕೆ ಸಿಎಂ ಶ್ಲಾಘನೆ

Upayuktha
0


ಬೆಂಗಳೂರು: ರಾಜ್ಯದ ಶಿಗ್ಗಾಂವಿ, ಚೆನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ವಿಶೇಷವಾಗಿ ಸಂಡೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಗೆಲುವಿಗೆ ಶ್ರಮಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. 


ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ಹಮ್ಮಿಕೊಂಡಿದ್ದರು. ಈ ವೇಳೆ ವೇಳೆ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದ ಲಾಡ್ ಅವರು ಸಿಹಿ ನೀಡಿ ಗೆಲುವಿನ ಸಂಭ್ರಮ ಹಂಚಿಕೊಂಡರು. 


ಈ ವೇಳೆ ಸಂಡೂರಿನ ಪ್ರಚಾರಕ್ಕಾಗಿ ಲಾಡ್ ಅವರು ಕ್ಷೇತ್ರದಲ್ಲೇ ವಾಸ್ತವ್ಯ ಹೂಡಿ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಗೆಲುವಿಗೆ ಶ್ರಮಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಬೆನ್ನುತಟ್ಟಿ ಪ್ರಶಂಸೆ ವ್ಯಕ್ತಪಡಿಸಿದರು.  


"ಹದಿನೈದು ದಿನ ಅಲ್ಲೇ ಉಳಿದುಬಿಟ್ಟಿದ್ದ. ಸಂಡೂರು ಗೆಲುವಿಗೆ ಲಾಡ್ ಅವರ ಶ್ರಮ ಸಾಕಷ್ಟಿದೆ" ಎಂದು ಖುಷಿ ವ್ಯಕ್ತಪಡಿಸಿದರು.  


ಈ ವೇಳೆ ಶಾಸಕರಾದ ರಿಜ್ವಾನ್ ಅರ್ಷದ್, ಡಾ. ಅಜಯ್ ಧರಂ ಸಿಂಗ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಡಾ. ಗೋವಿಂದರಾಜ್, ಪ್ರಕಾಶ್ ಸಿಂಗ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top