ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಬೆಳ್ತಂಗಡಿ ವಕೀಲರ ಸಂಘದ ಸಹಯೋಗ
ಉಜಿರೆ: ಉಜಿರೆಯ ಎಸ್.ಡಿ.ಎಂ. ಕಾಲೇಜು, ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ ಬೆಳ್ತಂಗಡಿಯ ವಕೀಲರ ಸಂಘ (ಬಾರ್ ಅಸೋಸಿಯೇಶನ್ ಬೆಳ್ತಂಗಡಿ)ದ ಸಹಯೋಗದಲ್ಲಿ ನ. 16ರಂದು ಸಂವಿಧಾನ ದಿನಾಚರಣೆ ನಡೆಯಲಿದೆ.
ಎಸ್.ಡಿ.ಎಂ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಜಿರೆಯ ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ, ಬೆಳ್ತಂಗಡಿ ವಕೀಲರ ಸಂಘ ಮತ್ತು ಅಧಿವಕ್ತಾ ಪರಿಷತ್ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ವಸಂತ ಮರಕಡ ಭಾಗವಹಿಸಲಿದ್ದಾರೆ. ಎಸ್.ಡಿ.ಎಂ. ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ