“ಮಂಜೂಷಾ” ವಸ್ತು ಸಂಗ್ರಹಾಲಯ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಿಂದ ಮಾನ್ಯತೆ

Upayuktha
0


ಪ್ರಮಾಣ ಪತ್ರ ಹಸ್ತಾಂತರ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ  ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಿಂದ ವಿಶೇಷ  ಮಾನ್ಯತೆಗೆ ಪಾತ್ರವಾಗಿದೆ.


ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ 76ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು.


ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಠ ಸೇವೆಯಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.


7500 ತಾಳೆಗರಿ ಹಸ್ತಪ್ರತಿಗಳು, 21,000 ಕಲಾತ್ಮಕ ವಸ್ತುಗಳು, 25,000 ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಮಿಕ್ಕಿ ವಿಂಟೇಜ್ ಕಾರುಗಳ ಸಂಗ್ರಹದ ಬಗ್ಯೆ ಹೆಗ್ಗಡೆಯವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top