ವೈಭವದಿಂದ ನಡೆದ ಲಲಿತೋದ್ಯಾನ ಉತ್ಸವ

Upayuktha
0


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಮೂರನೇ ದಿನವಾದ ಗುರುವಾರ ಲಲಿತೋದ್ಯಾನ ಉತ್ಸವ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.


ದೇವಾಲಯದ ಒಳಾಂಗಣದಲ್ಲಿ ಮಂಜುನಾಥನಿಗೆ ಪೂಜೆ ಸಲ್ಲಿಸಿ, ಉತ್ಸವಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಲಾಯಿತು. ನಂತರ ವಿವಿಧ ವೈದಿಕ ಕಾರ್ಯಗಳೊಂದಿಗೆ 16 ಸುತ್ತುಗಳ ಪ್ರದಕ್ಷಿಣೆ ಸೇವೆಯನ್ನು ಸರ್ವವಾದ್ಯಗಳೊಂದಿಗೆ ಸಲ್ಲಿಸಲಾಯಿತು.


ದೇವಾಲಯದಿಂದ ಸ್ವರ್ಣಪಲ್ಲಕ್ಕಿಯಲ್ಲಿ ಹೊರಟ ಉತ್ಸವಮೂರ್ತಿ ರಥಬೀದಿಯಲ್ಲಿ ಸಾಗಿ ಲಲಿತೋದ್ಯಾನ ಪ್ರವೇಶಿಸಿತು. ಲಲಿತೋದ್ಯಾನ ಕಟ್ಟೆಯಲ್ಲಿ ಉತ್ಸವಮೂರ್ತಿಯನ್ನು ಕುಳ್ಳಿರಿಸಿ ಮಂಜುನಾಥನಿಗೆ ಅಷ್ಟವಿಧಾನ ಸೇವೆ ಸಲ್ಲಿಸಲಾಯೊತು. ಸಲ್ಲಿ ಸೇವೆ ಸಲ್ಲಿಸಿದ ಬಳಿಕ ಉತ್ಸವಮೂರ್ತಿಯನ್ನು ದೇವಾಲಯದ ಮುಂಭಾಗದಲ್ಲಿ ಬೆಳ್ಳಿರಥದಲ್ಲಿ ವಿರಾಜಮಾನಗೊಳಿಸಿ ಒಂದು ಸುತ್ತು ಪ್ರದಕ್ಷಿಣೆ ಬರಲಾಯಿತು.


ಸ್ವಾಮಿಯನ್ನು ದೇವಾಲಯದೊಳಗೆ ಕೊಂಡೊಯ್ಯುವಲ್ಲಿಗೆ ಲಲಿತೋದ್ಯಾನ ಉತ್ಸವ ಸಂಪನ್ನವಾಯಿತು. ದೇವಾಲಯದ ಆನೆಗಳಾದ ಲಕ್ಷ್ಮಿ, ಶಿವಾನಿ ಮತ್ತು ಬಸವ ಭೀಷ್ಮ ಮೆರವಣಿಗೆ ಮುಂಭಾಗದಲ್ಲಿ ಹೆಜ್ಜೆ ಹಾಕಿ ಉತ್ಸವದ ಕಳೆ ಹೆಚ್ಚಿಸಿದವು. ನೆರೆದಿದ್ದ ಸಾವಿರಾರು ಭಕ್ತರು ಉತ್ಸವವನ್ನು ಕಣ್ತುಂಬಿಕೊಂಡರು. 

ವರದಿ: ಶ್ರವಣ್ ನೀರಬಿದಿರೆ


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top