ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರು ಹಾಗೂ ಬಾಲಕಿಯರು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ಅದ್ವಿತ್ ಶರ್ಮ ಚಿನ್ನದ ಪದಕ, ಪ್ರಥಮ ವಾಣಿಜ್ಯ ವಿಭಾಗದ ಪ್ರಮಥ್ ಎಂ ಭಟ್ ಹಾಗೂ ಪ್ರಾಪ್ತಿ ಶೆಟ್ಟಿ ಬೆಳ್ಳಿಯ ಪದಕ, ದ್ವಿತೀಯ ವಿಜ್ಞಾನ ವಿಭಾಗದ ಸಾತ್ವಿ ಬಿ.ಕೆ ಕಂಚಿನ ಪದಕವನ್ನು ಗಳಿಸಿರುತ್ತಾರೆ. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್,ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ