ಜಿಲ್ಲಾ ಮಟ್ಟದ ಐಟಿಐ ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಎಸ್‌ಡಿಎಂ ಮಹಿಳಾ ಐಟಿಐ ಪ್ರಥಮ

Upayuktha
0


ಉಜಿರೆ: ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಹಾಗೂ ರಿಯಲ್ ಎಸ್ಟೇಟ್ ಗ್ರೂಪ್ ಜಂಟಿ ಸಹಯೋಗದಲ್ಲಿ ನ. 17ರಂದು ನಡೆದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅಂತರ್ ಐಟಿಐ ವಾಲಿಬಾಲ್ ಮತ್ತು ತ್ರೋಬಾಲ್ ಪಂದ್ಯಾವಳಿಯ ತ್ರೋಬಾಲ್ ಪಂದ್ಯದಲ್ಲಿ ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐ ಪ್ರಥಮ ಸ್ಥಾನ ಗಳಿಸಿದೆ.


ಪಂದ್ಯದಲ್ಲಿ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ವಿದ್ಯಾರ್ಥಿನಿಯರು ಭಾಗವಹಿಸಿದ್ದು, ವಾಮಂಜೂರಿನ ಎಸ್.ಡಿ.ಎಂ. ಮಂಗಳಜ್ಯೋತಿ ಐಟಿಐ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದೆ.



ಪ್ರಥಮ ಸ್ಥಾನ ವಿಜೇತ ತಂಡಕ್ಕೆ ಟ್ರೋಫಿಯೊಂದಿಗೆ 3,000 ರೂ. ನಗದು ಬಹುಮಾನ ಲಭಿಸಿದ್ದು, ಲಾವಣ್ಯ ‘ಉತ್ತಮ ಎಸೆತಗಾರ್ತಿ’ ಹಾಗೂ ಮಂಜುಳಾ ‘ಆಲ್ ರೌಂಡರ್’ ಪ್ರಶಸ್ತಿ ಪಡೆದಿದ್ದಾರೆ. 


ವಿದ್ಯಾರ್ಥಿನಿಯರನ್ನು ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಾ. ಹೇಮಾವತಿ ವೀ. ಹೆಗ್ಗಡೆ, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ಎಸ್., ಎಸ್.ಡಿ.ಎಂ. ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಹಾಗೂ ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top