ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆ

Upayuktha
0


ಉಡುಪಿ:
ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ 69 ನೇ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು  ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿ, ಕರ್ನಾಟಕ ರಾಜ್ಯೋತ್ಸವದ ಸಂದೇಶ ನೀಡಿದರು. 


ಈ ಸಂದರ್ಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್‌ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ್ ಹೇರೂರು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top