ಪ್ರತಿಷ್ಠಿತ ಕನಕ ಪ್ರಶಸ್ತಿ ಸ್ವೀಕರಿಸಿದ ಡಾ. ತಾಳ್ತಜೆ ವಸಂತ ಕುಮಾರ

Upayuktha
0


ಪುತ್ತೂರು: ಡಾ. ತಾಳ್ತಜೆ ವಸಂತ ಕುಮಾರ ಅವರಿಗೆ ಪ್ರತಿಷ್ಠಿತ 'ಕನಕ' ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ನೀಡಿ ಗೌರವಿಸಿದರು.


ದಿವಂಗತ ಕೃಷ್ಣ ಭಟ್ಟ ಹಾಗೂ ಲಕ್ಷ್ಮಿ ಅವರ ಸುಪುತ್ರನಾದ ಡಾ ತಾಳ್ತಜೆ ವಸಂತ ಕುಮಾರ ಇವರು ಕರ್ನಾಟಕದಲ್ಲಿ ಬೌದ್ಧ ಸಂಸ್ಕೃತಿ ಎಂಬ ವಿಷಯದಲ್ಲಿ ಪಿಎಚ್ ಡಿ ಪದವಿ ಪಡೆದಿರುತ್ತಾರೆ. ಸುದೀರ್ಘ 37 ವರ್ಷಗಳ ಕಾಲ ಉಪನ್ಯಾಸಕ ವೃತ್ತಿಯನ್ನು ಮಾಡಿರುವ ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಮುಂಬೈ ವಿಶ್ವವಿದ್ಯಾನಿಲಯದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಇವರ ಮಾರ್ಗದರ್ಶನದಲ್ಲಿ 17 ಮಂದಿ ಪಿಎಚ್‌ಡಿ ಹಾಗೂ 18 ಮಂದಿ ಎಂಫಿಲ್ ಪಡೆಡಿರುತ್ತಾರೆ.


ಸಾಹಿತ್ಯ ಕ್ಷೇತ್ರದಲ್ಲಿ  55 ವರ್ಷಗಳ ಸುದೀರ್ಘ ಸೇವೆಯನ್ನು ನೀಡಿದ ಇವರು ಈವರೆಗೆ ಒಟ್ಟು 24 ಕೃತಿಗಳನ್ನು ರಚಿಸಿದ್ದು, ಇವರು ರಚಿಸಿದ ಅನೇಕ ಲೇಖನಗಳು ಪ್ರತಿಷ್ಠಿತ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 


1993ರಲ್ಲಿ ಭಾರತ ಜರ್ಮನಿ ಸಾಂಸ್ಕೃತಿಕ ವಿನಿಮಯ ಯೋಜನೆಯ ಅನ್ವಯ ಜರ್ಮನ್ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಹಾಗೂ ಕರ್ನಾಟಕದ ವಿಷಯದಲ್ಲಿ ಉಪನ್ಯಾಸ ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಮಹಾರಾಷ್ಟ್ರ ರಾಜ್ಯ ಘಟಕದ ಸ್ಥಾಪಕ ಅಧ್ಯಕ್ಷರಾಗಿಯೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top