'ಎಟರ್ನಸ್ - 2024' : ಫಿಲೋಮಿನಾ ಪ.ಪೂ ಕಾಲೇಜಿಗೆ ದ್ವಿತೀಯ ರನ್ನರ್ ಅಪ್ ಪ್ರಶಸ್ತಿ

Chandrashekhara Kulamarva
0
ಅಂತರ್ ಕಾಲೇಜು ಮಟ್ಟದ ಸ್ಪರ್ಧೆ



ಪುತ್ತೂರು:  ಅಕ್ಷಯ ಕಾಲೇಜು  ಪುತ್ತೂರು ಇದರ ಆಶ್ರಯದಲ್ಲಿ ನ16 ರಂದು ನಡೆದ 'ಎಟರ್ನಸ್ - 2024' ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

 

ಭಾವಗೀತೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಪ್ರಥಮ, ವೈಯಕ್ತಿಕ ನೃತ್ಯ  ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ತ್ರಿಷಾ ಕೆ.ಬಿ ದ್ವಿತೀಯ, ಮಾಡೆಲ್ ಪ್ರೆಸೆಂಟೇಷನ್ ನಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಯಶವಂತ್ ಮತ್ತು ಗಗನ್ ಪ್ರಥಮ, ವೆಲ್ತ್ ಔಟ್ ಆಫ್ ವೇಸ್ಟ್ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪ್ರಜೋಶ್ ಮತ್ತು ನಿಖಿಲ್ ದ್ವಿತೀಯ  ಹಾಗೂ Mr & Ms ಎಟರ್ನಸ್ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಹಶೀಮ್ ಪ್ರಥಮ ಮತ್ತು ನಾಟ್ ಎದುಕ್ಕೆ ನಾಫಿಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ರಶ್ಮಿ ಪಿ ಎಸ್ ಹಾಗೂ ಭರತ್ ಜಿ. ಪೈ ಉಪಸ್ಥಿತರಿದ್ದರು.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top