ಬೆಂಗಳೂರು: ನಗರದ ಕಾಡುಗೋಡಿಯ ಜನನಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ಶಾಲೆಯ ಅಧ್ಯಕ್ಷರು ಎನ್ .ಯಲ್ಲಪ್ಪ ರವರು ಮಾತನಾಡುತ್ತಾ ಭಾಷೆಗಿಂತ ದೊಡ್ಡ ಬೆಸುಗೆ ಇಲ್ಲ, ನಮ್ಮ ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯ ಅಳಿವು ಉಳಿವು ಪ್ರಶ್ನೆ ಬಂದಾಗ ನಾವೆಲ್ಲ ಒಂದಾಗಿ ಸೇರಿ ಹೋರಾಟ ಮಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಎನ್. ಯಲ್ಲಪ್ಪ ಅಧ್ಯಕ್ಷರು, ಹಾಗೂ ಕೆ.ಎಸ್ ಚಂದ್ರಶೇಖರ್, ಕಾರ್ಯದರ್ಶಿಗಳು ಧ್ವಜಾರೋಹಣ ನೆರವೇರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಶಾಲೆಯ ವಿದ್ಯಾರ್ಥಿಗಳು ನಾಡು ನುಡಿ ಸಂಸ್ಕೃತಿಯನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು. ಆಡಳಿತಾಧಿಕಾರಿ ಪದ್ಮಾವತಿ ಕೆ.ವಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಪ್ರಾಂಶುಪಾಲೆ ರೇಖ ಎಸ್, ಉಪ ಪ್ರಾಂಶುಪಾಲೆ ಸುಧಾರಾಣಿ ಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ