ಪದುವಾ ಕಾಲೇಜಿನಲ್ಲಿ ಕುಟುಂಬ ದಿನ ಕಾರ್ಯಕ್ರಮ

Upayuktha
0


ಮಂಗಳೂರು: ವಿದ್ಯಾರ್ಥಿಗಳ ಪೋಷಕರು ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಾತ್ರ ಶಾಲೆ ಮತ್ತು ಪೋಷಕರ ನಡುವಿನ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದು ಎಜೆ ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಬೆಂದೂರ್ ಪ್ಯಾರಿಷ್ ಪಾಸ್ಪೋರೋಲ್ ಪರಿಷದ್‌ನ ಅಧ್ಯಕ್ಷರಾಗಿರುವ ವಿನೋದ್ ಡಿಸೋಜ ಹೇಳಿದರು.


ಪಾದುವ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಮಹೋತ್ಸವದ ಅಂಗವಾಗಿ ಕಾಲೇಜಿನ ಸಭಾಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕುಟುಂಬದಿನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.


ಕಾಲೇಜಿನಲ್ಲಿ ಪೋಷಕರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ನಡೆಸುತ್ತಿರುವುದನ್ನು ನೋಡುವಾಗ ಕುಟುಂಬದ ಒಂದು ಕಾರ್ಯಕ್ರಮದಂತೆ ಕಾಣುತ್ತಿದೆ ಎಂದರು.


ಕಾಲೇಜಿನ ಆವರಣ ನಿರ್ದೇಶಕ ಫಾದರ್ ಅರುಣ್ ವಿಲ್ಸನ್ ಲೋಬೊ ರವರು ಮಾತನಾಡಿದರು. ಪದುವಾ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಫಾದರ್ ವಾಲ್ಟರ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು.


ಈ ಸಂದರ್ಭ ಹಲವು ಆಟೋಟ ಸ್ಪರ್ಧೆ ನಡೆಸಲಾಯಿತು. ಪೋಷಕರು ಮತ್ತು ಉಪನ್ಯಾಸಕರಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಾರಿಯಟ್ ಮಸ್ಕರೇನ್ಹಸ್ ಅವರು ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಉಪನ್ಯಾಸಕರಾದ ಡಾ. ರಾಮ್ ಪ್ರಸಾದ್, ಪೋಷಕರಾದ ನಿತಾಶ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಿಯು ಕಾಲೇಜಿನ ಉಪನ್ಯಾಸಕರು ಸಂಯೋಜಿಸಿದರು.


ವಿದ್ಯಾರ್ಥಿಗಳ ಪೋಷಕರು ಪ್ರಾರ್ಥಿಸಿದರು. ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಮಾರಿಯಟ್ ಮಸ್ಕರೇನ್ಹಸ್ ಸ್ವಾಗತಿಸಿದರು. ಧರಣೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಅವರು ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top