ಬೆಂಗಳೂರು: ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಶ್ರೀಮತಿ ಸುಧಾ ನಾರಾಯಣ ಮೂರ್ತಿ ದಂಪತಿಗಳು ಕುಟುಂಬ ಸಮೇತ ಹಾಗೂ ಅವರ ಅಳಿಯ, ಬ್ರಿಟನ್ ದೇಶದ ಮಾಜಿ ಪ್ರಧಾನಿ ಋಷಿ ಸುನಕ್ ದಂಪತಿಗಳು ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಗೆ ಆಗಮಿಸಿ ಗುರು ರಾಯರ ದರ್ಶನ ಪಡೆದು ಕಾರ್ತಿಕ ಮಾಸದ ಪ್ರಯುಕ್ತ ರಾಯರ ಸನ್ನಿಧಿಯಲ್ಲಿ ದೀಪಗಳನ್ನು ಬೆಳಗಿಸಿ ಶ್ರೀ ರಾಘವೇಂದ್ರ ಸ್ವಾಮಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್, ಕೆ ವಾದಿಂದ್ರಾಚಾರ್ಯರು ರಾಯರ ಶೇಷ ವಸ್ತ್ರ ಫಲಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು ಈ ಸಂದರ್ಭದಲ್ಲಿ ಶ್ರೀಮಠದ ಅರ್ಚಕ ವರ್ಗದವರು "ವೇದ ಘೋಷ ಮಂತ್ರ" ಪೂರ್ಣ ಕುಂಭ ಸ್ವಾಗತದೊಂದಿಗೆ ಸನ್ನಿಧಿಗೆ ಬರಮಾಡಿಕೊಂಡರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

