ಡಿ.1: ಕೊಂಚಾಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ, ನೇತ್ರದಾನ ಸಂಕಲ್ಪ ನೋಂದಣಿ

Upayuktha
0


ಕೊಂಚಾಡಿ: ವಿಶ್ವ ದೃಷ್ಟಿ ದಿನದ ಅಂಗವಾಗಿ  ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಸಂಕಲ್ಪ ನೋಂದಾವಣೆ ಕಾರ್ಯಕ್ರಮವನ್ನು ಭಾನುವಾರ (ಡಿಸೆಂಬರ್ 1) ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದಲ್ಲಿ ಆಯೋಜಿಸಲಾಗಿದೆ.


ಸಕ್ಷಮ ದ.ಕ. ಜಿಲ್ಲಾ ಘಟಕ, ಮಂಗಳೂರು  ಒನ್‌ಸೈಟ್ ಎಸ್ಪಿಲೊರ್‌ಲಕ್ಸೋಟಿಕ ಫೌಂಡೇಶನ್ ಬೆಂಗಳೂರು,  ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು,  ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ.), ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.


ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ವಿಜಯ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಕ್ಷಮ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ಭಟ್ ಕಾಕುಂಜೆ ಅಧ್ಯಕ್ಷತೆ ವಹಿಸಲಿದ್ದಾರೆ.


ಜಯಪ್ರಕಾಶ್ ಎಂ.ಆರ್.ಡಬ್ಲ್ಯೂ, ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣ ಇಲಾಖೆ ಮಂಗಳೂರು;  ನೇತ್ರ ತಜ್ಞರು, ಪ್ರಸಾದ್‌ ನೇತ್ರಾಲಯ, ಮಂಗಳೂರು; ಭಾಸ್ಕರ ಹೊಸಮನೆ, ನಿವೃತ್ತ ಮುಖ್ಯೋಪಾಧ್ಯಾಯರು ಸರಕಾರಿ ಪ್ರೌಢಶಾಲೆ, ಮೂಡುಶೆಡ್ಡೆ; ಸಕ್ಷಮ, ದ.ಕ. ಜಿಲ್ಲಾ ಘಟಕದ ಕಾರ್ಯದರ್ಶಿ ಹರೀಶ್ ಪ್ರಭು ಅವರ ಗೌರವ ಉಪಸ್ಥಿತಿ ಇರಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top