ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ, ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಆಯೋಜಿಸಲಾದ 2024-25 ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಮಹಾಸಭೆ ಕಾರ್ಯಕ್ರಮವನ್ನು ನ.9ರಂದು ಪುಂಜಾಲಕಟ್ಟೆಯ ವಿಶ್ವಕರ್ಮ ಸಭಾಭವನದಲ್ಲಿ ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಆ್ಯಂಟನಿ ಟಿ.ಪಿ. ಇವರು ಮಕ್ಕಳನ್ನು ಯಾವ ರೀತಿ ನೋಡಿಕೊಳ್ಳಬೇಕು ಮತ್ತು ಅವರನ್ನು ಹೇಗೆ ತಿದ್ದಬೇಕು ಎಂಬುದನ್ನು ಪೋಷಕರಿಗೆ ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶಾಮರಾವ್ ಯು.ಜಿ., ಅಧ್ಯಕ್ಷರು ಇವರು ಸಹ ಮಕ್ಕಳು ಮತ್ತು ಪೋಷಕರ ಒಡನಾಟ ಹೇಗೆ ಇರಬೇಕೆಂದು ಹೇಳಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ.ಮಾಧವರವರು ಅಧ್ಯಕ್ಷೀಯ ನುಡಿಗಳನ್ನಾಡಿದರು. ಐಕ್ಯೂಎಸಿ ಸಂಚಾಲಕಿ ಪ್ರೊ. ಅವಿತಾ ಮರಿಯ ಕ್ಯಾಡ್ರಾಸ್, ರಕ್ಷಕ ಶಿಕ್ಷಕ ಸಂಘದ ಸಂಚಾಲಕ ಪ್ರೊ. ಸಂತೋಷ್ ಪ್ರಭು ಮತ್ತು ಪ್ರೊ. ಆಂಜನೇಯ ಎಂ ಎನ್ ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ. ಅಮಿತಾ ಮರಿಯಾ ಕ್ವಾಡ್ರಸ್ ಸ್ವಾಗತಿಸಿದರು, ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಡಾ. ವೈಶಾಲಿ ಯು ವಂದಿಸಿದರು. ಶ್ರೀಮತಿ ಶ್ರೀಲತಾ ರೈ ಕನ್ನಡ ಭಾಷಾ ಉಪನ್ಯಾಸಕರು ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ