ಕ್ರೀಡೆಯಿಂದ ಸದೃಢ ಮನಸ್ಸು, ದೈಹಿಕ ಆರೋಗ್ಯ

Upayuktha
0


ಸುರತ್ಕಲ್: ಕ್ರೀಡೆ ಎಂಬುದು ಸಂಘಟಿತ ಸ್ಪರ್ಧಾತ್ಮಕ ಕೌಶಲ್ಯ ಪೂರ್ಣ ದೈಹಿಕ ಚಟುವಟಿಕೆಯಾಗಿದ್ದು, ಕ್ರೀಡೆ ಮನುಷ್ಯನ ಮನಸ್ಸನ್ನು ಸದಾ ಉತ್ಸಾಹದಿಂದ ಹಾಗೂ ಸದಾ ಚಟುವಟಿಕೆಯಿಂದ ಇರಲು ಸಹಕಾರಿಯಾಗುತ್ತದೆ ಮತ್ತು ವಿದ್ಯಾರ್ಥಿಗಳು ಹೆಚ್ಚೆಚ್ಚು ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವಂತರಾಗಿ ಇರಬಹುದು ಎಂದು ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಸ್ಥಳೀಯ ಸಿವಿಲ್ ಇಂಜಿನಿಯರ್, ಕಾಂಟ್ರಾಕ್ಟರ್ ಆಗಿರುವ ಪ್ರಸಿದ್ಧ ಪಿ. ಹೇಳಿದರು.


ಅವರು ಸುರತ್ಕಲ್‌ನ ಅನುದಾನಿತ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ನಡೆದ ವಾರ್ಷಿಕ ಕ್ರೀಡಾ ಕೂಟ ಉದ್ಘಾಟಿಸಿ ಮಾತನಾಡಿದರು.


ಕ್ರೀಡಾ ಕೂಟದ ಅಧ್ಯಕ್ಷತೆಯನ್ನು ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕೋಶಾಧಿಕಾರಿ ರಮೇಶ್ ಟಿ.ಎನ್ ವಹಿಸಿ ಮಕ್ಕಳು ಕಲಿಕೆಯನ್ನು ಅಭ್ಯಾಸ ಮಾಡುವುದರ ಜೊತೆಗೆ ಕ್ರೀಡೆಯಲ್ಲಿಯೂ ಸಾಧನೆ ಮಾಡುವಂತಾಗಲಿ ಎನ್ನುತ್ತಾ, ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವ ಎಲ್ಲಾ ಕ್ರೀಡಾಳುಗಳಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಗೌರವಾಧ್ಯಕ್ಷ ಗಂಗಾಧರ ಪೂಜಾರಿ, ವಿದ್ಯಾದಾಯಿನೀ ಆಂಗ್ಲ ಮಾದ್ಯಮ ಶಾಲೆಯ ಪ್ರಾಂಶುಪಾಲ ಡಾ. ಶಶಿಕುಮಾರ್ ಕೆ.ಸಿ, ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಅಧಿಕಾರಿ ಶ್ರೀಮತಿ ಮೃದುಲಾ ಬಿನು ಉಪಸ್ಥಿತರಿದ್ದು ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಹಿಂದು ವಿದ್ಯಾದಾಯಿನೀ ಸಂಘದ ಜೊತೆ ಕಾರ್ಯದರ್ಶಿಗಳಾದ ಎಂ.ಜಿ ರಾಮಚಂದ್ರ, ಹಿಂದು ವಿದ್ಯಾದಾಯಿನೀ ಸಂಘದ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿದ್ಯಾದಾಯಿನೀ ಸ್ಪೋರ್ಟ್ಸ್ ಅಕಾಡೆಮಿ ಇದರ ಸಂಯೋಜಕ ಸುಬ್ರಹ್ಮಣ್ಯ ಟಿ. ಉಪಸ್ಥಿತರಿದ್ದರು.


ಹಿಂದು ವಿದ್ಯಾದಾಯಿನೀ ಸಂಘದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಶಾಲಾ ಸಂಚಾಲಕ ಸುಧಾಕರ ರಾವ್ ಪೇಜಾವರ ಇವರ ಮಾರ್ಗದರ್ಶನದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ. ಎಲ್ಲರನ್ನು ಸ್ವಾಗತಿಸಿದರು. ಶಾಲಾ ಸಹ ಶಿಕ್ಷಕ ದಿವಸ್ಪತಿ ಕಾರ್ಯಕ್ರಮ ನಿರೂಪಿಸಿ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಸೌಮ್ಯ ವಂದಿಸಿದರು. ಅಂತಿಮವಾಗಿ ಕ್ರೀಡಾಕೂಟವು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಸಂಘದ ಸಮೂಹ ಸಂಸ್ಥೆಯಾದ ವಿದ್ಯಾದಾಯಿನೀ ಆಂಗ್ಲ ಮಾದ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕಿಶೋರ್, ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಮೋಹನ್, ಜಿ.ಎಚ್.ಎಸ್ ಐದನೇ ಬ್ಲಾಕ್ ಕಾಟಿಪಳ್ಳ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ರಾಜಶ್ರೀ, ಶಾಲಾ ಎಲ್ಲಾ ಶಿಕ್ಷಕ-ಶಿಕ್ಷಕೇತರರು, ಹಳೆ ವಿದ್ಯಾರ್ಥಿ ಸಂಘ ಮತ್ತು ರಕ್ಷಕ ಶಿಕ್ಷಕ ಸಂಘದ ಸರ್ವ ಸದಸ್ಯರ ಸಹಕಾರದೊಂದಿಗೆ ಸಂಪನ್ನಗೊಂಡಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top