ಗೋವಿಂದದಾಸ ಕಾಲೇಜ್‌ನಲ್ಲಿ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Upayuktha
0


ಸುರತ್ಕಲ್‌: ಕ್ರೀಡಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವುದರಿಂದ ನಾಯಕತ್ವ, ಹೊಣೆಗಾರಿಕೆ, ತಾಳ್ಮೆ, ಆತ್ಮವಿಶ್ವಾಸ, ಒಗ್ಗಟು ಮುಂತಾದ ಜೀವನ ಕೌಶಲ್ಯಗಳನ್ನು ಕಲಿಯಬಹುದು. ದೈಹಿಕ ಮತ್ತು ಮಾನಸಿಕ ಕ್ಷಮತೆಗಳನ್ನು ಸದೃಢಪಡಿಸಲು ಕ್ರೀಡೆಯ ಸಹಕಾರಿಯಾಗಿದೆ ಎಂದು ಕಾಲೇಜಿನ ಹಳೆ ವಿದ್ಯಾರ್ಥಿನಿ 2024ನೇ ಸಾಲಿನ ದಕ್ಷಿಣಕನ್ನಡ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಮಂಗಳೂರಿನ ಮರ್ಸಿ ಬ್ಯೂಟಿ ಅಕಾಡಮಿ ಮತ್ತು ಲೇಡೀಸ್ ಸಲೂನ್‌ನ ಮಾಲಕಿ ಮರ್ಸಿ ವೀಣಾ ಡಿ’ಸೋಜಾ ನುಡಿದರು.


ಅವರು ಹಿಂದು ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಆಡಳತಕ್ಕೊಳಪಟ್ಟ ಗೋವಿಂದದಾಸ ಕಾಲೇಜು, ಸುರತ್ಕಲ್‌ನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.


ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ಗೋಪಾಲ ಎಂ.ಗೋಖಲೆ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರೊ.ಕೃಷ್ಣಮೂರ್ತಿ ಪಿ.ಮಾತನಾಡಿ, ಶೈಕ್ಷಣಿಕ ಚುಟವಟಿಕೆಗಳಷ್ಟೇ ಕ್ರೀಡಾ ಚಟುವಟಿಕೆಗಳೂ ವಿದ್ಯಾರ್ಥಿ ಜೀವನದ ಪ್ರಮುಖ ಭಾಗವಾಗಿದ್ದು ವಿದ್ಯಾರ್ಥಿಗಳು ಸಕ್ರೀಯವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದರು.


ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಶಾಂತ್‌ ಎಂ.ಡಿ.ಅತಿಥಿಗಳನ್ನು ಪರಿಚಯಿಸಿದರು. ಹಿತಾ ಉಮೇಶ್‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶರೂನ್‌ ಎಲ್ಸನ್ ಡಿ’ಸೋಜಾ ಪ್ರತಿಜ್ಞಾ ವಿಧಿ ಬೋಧಿಸಿದರು.


ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಾಧಿಕಾರಿ ಮೃದು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಹರೀಶ್‌ಕುಮಾರ್ ಮತ್ತು ಸಲಹೆಗಾರ ಗಂಗಾಧರ ಪೂಜಾರಿ,  ಉಪ ಪ್ರಾಚಾರ್ಯ ಪ್ರೊ. ನೀಲಪ್ಪ ವಿ., ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜಕ ಪ್ರೊ. ಹರೀಶ ಆಚಾರ್ಯ ಪಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್, ಸ್ಟಾಫ್ ಅಸೋಸಿಯೇಶನ್‌ನ ಕಾರ್ಯದರ್ಶಿ ಗೀತಾ ಪಿ., ಗೋವಿಂದದಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲಕ್ಷ್ಮೀ ಪಿ., ಪ್ರಾಧ್ಯಾಪಕಿ ಶೈಲಜಾ, ಕ್ರೀಡಾ ಕಾರ್ಯದರ್ಶಿಗಳಾದ ಪೃಥ್ವಿರಾಜ್ ಮತ್ತು ಸ್ವಾತಿ ಬಿ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಮರ್ಸಿ ವೀಣಾ ಡಿ’ಸೋಜಾ ಅವರನ್ನು ಅಭಿನಂದಿಸಲಾಯಿತು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top