ಅಂತರ್ ಕಾಲೇಜು ಯುವಜನೋತ್ಸವ: ಕುಮಟಾದ ಡಾ. ಎ.ವಿ ಬಾಳಿಗಾ ಕಾಲೇಜಿಗೆ ಹಲವು ಬಹುಮಾನ

Upayuktha
0


ಕುಮಟಾ: ಅಂಕೋಲಾ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರ್ ಕಾಲೇಜು ವಲಯ ಮಟ್ಟದ ಯುವಜನೋತ್ಸವದಲ್ಲಿ ಕುಮಟಾದ ಡಾ. ಎ.ವಿ. ಬಾಳಿಗಾ ಕಾಲೇಜಿನ ವಿದ್ಯಾರ್ಥಿಗಳಾದ ಬಿ.ಎಲ್. ಸೃಜನ್ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ, ಮಿಮಿಕ್ರಿಯಲ್ಲಿ ದ್ವಿತೀಯ ಹಾಗೂ ರಂಜಿತಾ ಪಡವಳ್ಕರ್ ಕಾರ್ಟೂನ್ ಸ್ಪರ್ಧೆಯಲ್ಲಿ ಪ್ರಥಮ, ಧನು ಅನಂತ್ ಹೆಗಡೆ ಚರ್ಚಾ ಸ್ಪರ್ಧೆಯಲ್ಲಿ ತೃತೀಯ, ಅಜೀಮಾ ಬೀರ್ ಕೋಡಿಕಾರ್ ಮೆಹಂದಿ ಸ್ಪರ್ಧೆಯಲ್ಲಿ ತೃತೀಯ, ಬಹುಮಾನ ಪಡೆದಿದ್ದಾರೆ.


ವಿದ್ಯಾರ್ಥಿನಿಯರ ನೃತ್ಯ ತಂಡ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಮತ್ತು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಎಲ್ಲಾ ವಿದ್ಯಾರ್ಥಿಗಳು ಧಾರವಾಡ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಯುವಜನೋತ್ಸವದ ಸಂದರ್ಭದಲ್ಲಿ ಡಾ ಶ್ರೀನಿವಾಸ್ ಹರಿಕಾಂತ್ ಹಾಗೂ ಪ್ರೊ. ಸುಮಾ ಆಗೇರ್ ಇವರು ವಿದ್ಯಾರ್ಥಿಗಳ ಜೊತೆಗಿದ್ದು ಪ್ರೋತ್ಸಾಹ ನೀಡಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲೆ ಡಾ.ರೇವತಿ ಆರ್ ನಾಯ್ಕ, ಯೂನಿಯನ್ ಚೇರ್ಮನ್ ಅರವಿಂದ್ ನಾಯಕ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿರುತ್ತಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top