ಗೃಹರಕ್ಷಕ ದಳದ ಕಛೇರಿಯಲ್ಲಿ ಕನಕದಾಸ ಜಯಂತಿ ಆಚರಣೆ

Upayuktha
0


ಮಂಗಳೂರು: ಜಿಲ್ಲಾ ಗೃಹರಕ್ಷಕದಳ ಮತ್ತು ಪೌರ ರಕ್ಷಣಾ ಕಛೇರಿ ಮೇರಿಹಿಲ್‍ನಲ್ಲಿ ಸೋಮವಾರ ಕನಕದಾಸ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು.  ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ ಸಾಮಾನ್ಯವಾಗಿ ಪ್ರತೀ ವರ್ಷ ಕಾರ್ತಿಕ ಮಾಸದ 18ನೇ ದಿನದಂದು ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತದೆ. ಕರ್ನಾಟಕ ಸರ್ಕಾರ 2008 ರಿಂದ ಕನಕದಾಸ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿದೆ. ಅವರು 1509 ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಹಿಂದೂ ಕುರುಬ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. 


ಮೊದಲು ಯೋಧನಾಗಿದ್ದ ಇವರು ಬಳಿಕ ದೇವರ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹರಿದಾಸರಾದರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂತಹ ಉಪದೇಶಗಳನ್ನು ನೀಡಿ ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರಲ್ಲಿ ಒಬ್ಬರಾದರು. ಕುಲಕುಲ ಎಂದು ಹೊಡೆದಾಡದಿರಿ ಎಂದು ಸಾರಿದರು. ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ. ಹಾಗಾಗಿ ಕನಕದಾಸರ ಜೀವನ ಸಾರ  ಹಾಗೂ  ಅವರ ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ನುಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಗೃಹರಕ್ಷಕದಳ ಕಛೇರಿಯ ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ., ಕಚೇರಿ ಸಿಬ್ಬಂದಿ ಮಂಜುಳಾ ಮತ್ತು ಮಂಗಳೂರು ಘಟಕದ ಸಾರ್ಜಂಟ್ ಸುನಿಲ್ ಕುಮಾರ್, ಉಳ್ಳಾಲ ಘಟಕದ ಪ್ರಭಾರ ಘಟಕಾಧಿಕಾರಿ ಸುನಿಲ್, ಮೂಡಬಿದ್ರಿ ಘಟಕದ ಚಂದ್ರಶೇಖರ್, ತೃತೇಶ್ ಹಾಗೂ ಸುಲೋಚನಾ, ಖತೀಜಮ್ಮ ಉಪಸ್ಥಿತರಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top