ಶಿವಮೊಗ್ಗ: ಶಿವಮೊಗ್ಗದ ಮಾನಸ ಟ್ರಸ್ಟ್ ಮುನ್ನಡೆಸುತ್ತಿರುವ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ 'ನಾಡದೇವಿಗೆ ಬೆಳಗೋಣ ನುಡಿಯ ದೀವಿಗೆ' ಎಂಬ ಕಾರ್ಯಕ್ರಮವನ್ನು ನಾಳೆ (ನ.21) ಆಯೋಜಿಸಿದೆ.
69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಹೊಸನಗರದ ಕುವೆಂಪು ವಸತಿ ಶಾಲೆಯ ನಿವೃತ್ತ ಪ್ರಾಂಶುಪಾಲರಾದ ಡಾ. ಸೊನಲೆ ಶ್ರೀನಿವಾಸ್ ವಿಶೇಷ ಆಹ್ವಾನಿತರಾಗಿ ಭಾಗವಹಿಸುತ್ತಿದ್ದಾರೆ.
ಮಾನಸ ಟ್ರಸ್ಟ್ ನಿರ್ದೇಶಕರಾದ ಡಾ. ರಜನಿ ಪೈ ಹಾಗೂ ಎಂಸಿಸಿಎಸ್ ಶಿವಮೊಗ್ಗದ ನಿರ್ದೇಶಕರಾದ ಪ್ರೊ. ರಾಜೇಂದ್ರ ಚೆನ್ನಿ ಅವರ ಗೌರವ ಉಪಸ್ಥಿತಿ ಇರಲಿದೆ. ಕಾಲಲೇಜಿನ ಪ್ರಾಂಶುಪಾಲರಾದ ಡಾ. ಸಂಧ್ಯಾ ಕಾವೇರಿ ಅವರು ಅಧ್ಯಕ್ಷತೆವಹಿಸಲಿದ್ದಾರೆ. ಕನ್ನಡ ವಿಭಾಗದ ಮುಖ್ಯಸ್ಥ ಮೋಹನ್ ಕುಮಾರ್ ಆರ್ ಉಪಸ್ಥಿತರಿರುತ್ತಾರೆ. ಕನ್ನಡ ವಿಭಾಗದ ಉಪನ್ಯಾಸಕರಾದ ಶ್ರೀಮತಿ ಕವಿತಾ ಸುಧೀಂದ್ರ ಮತ್ತು ಮಧು ಟಿ. ಅವರು ಸಹಕರಿಸಲಿದ್ದಾರೆ.
ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ