ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

Upayuktha
0


ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆ ಹಾಗೂ ಜನತಾ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.


ಜನತಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡ ನಾಡು ನುಡಿಯ ಅಭಿಮಾನ ಸಾರುವ ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು. ಶಾಲಾ ವಿದ್ಯಾರ್ಥಿ ನಾಯಕ ಕಿಶನ್ ಸೂಚನೆಗಳನ್ನು ನೀಡಿದರು. ಮುಖ್ಯೋಪಾಧ್ಯಾಯ ಟಿ.ಆರ್. ನಾಯ್ಕ್ ವಂದಿಸಿದರು.


ಜನತಾ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೆ. ಶೀನಪ್ಪ ನಾಯ್ಕ್ ಅವರ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು. ಬೋಧಕ- ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top