ಭಾವಗೀತೆ ಸ್ಪರ್ಧೆ: ಸಹಶಿಕ್ಷಕ ಶಂಕರ್ ಕತ್ತಿ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಸಮೀಪದ ಚಿಲ್ಲಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಂಕರ್ ಕತ್ತಿ ಭಾವಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬಾಗಲಕೋಟೆ ಇವರ ಸಹಯೋಗದಲ್ಲಿ ಬಾಗಲಕೋಟೆ ನವನಗರದ ಆದರ್ಶ ವಿದ್ಯಾಲಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ನಡೆದ  ಭಾವಗೀತೆ ಸ್ಪರ್ಧೆಯಲ್ಲಿ ಪ್ರಥ ಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


ವಿದ್ಯಾರ್ಥಿ ದೆಸೆಯಿಂದಲೇ ಗಾಯನದಲ್ಲಿ ಆಸಕ್ತಿ ಇರುವ ಶಿಕ್ಷಕ ಶಂಕರ್ ಕತ್ತಿ ಸ್ಥಳೀಯ ಮತ್ತು ರಾಜ್ಯಮಟ್ಟದ ಸಭೆ ಸಮಾರಂಭಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಲ್ಲಿ ನಡೆದ ಎನ್‌ಪಿಎಸ್ ನೌಕರರ ಹೋರಾಟದಲ್ಲಿ ಇವರು ಹಾಡಿದ ನೂತನ ಪಿಂಚಣಿ ಯೋಜನೆ ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ 20,000ಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.


ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲೂಕಿನ ಕೀರ್ತಿ ಹೆಚ್ಚಿಸಿದ ಶಂಕರ್ ಕತ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಎಸ್ ಗುಡಗುಂಟಿ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top